ನವದೆಹಲಿ : ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರ ಈ ನಿಲುವು ತಾಳಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕರ್ ಸ್ಪಷ್ಟನೆ ನೀಡಿದ್ದಾರೆ.
ದೇಶದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾಗಿ ಯುವ ವಿಜ್ಞಾನಿಗೆ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಡಿಆರ್ಡಿಒ ಮುಖ್ಯಸ್ಥ ಅವಿನಾಶ್ ಚಂದರ್ ಅವರನ್ನು ಕೇಂದ್ರ ಸರ್ಕಾರ ಜ.13ರಂದು ವಜಾ ಮಾಡಿತ್ತು. ಚಂದರ್ ಸಂಶೋಧನಾ ಕ್ಷೇತ್ರಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನಲೆಯಲ್ಲಿ ಇನ್ನೂ 15 ತಿಂಗಳ ಕಾಲಾವಧಿ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಅವಿನಾಶ್ ಚಂದರ್ ಅವರನ್ನು ವಜಾ ಮಾಡಿದೆ ಎಂದು ಹೇಳಲಾಗುತ್ತಿದೆ.