ನವದೆಹಲಿ : ಕೇಂದ್ರ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರ ಮೇಲೆ ಯಾವುದೇ ಒತ್ತಡ ಹೇರಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟ ಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸುನಾಂದಾ ಕೊಲೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಒತ್ತಡ ಹೇರಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಲಾಗುತ್ತಿದೆ. ತನಿಖಾ ತಂಡದ ಮೇಲೆ ಯಾವುದೇ ಒತ್ತಡ ಹೇರಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಕೇಂದ್ರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ. ಈಗಾಗಲೇ ದೆಹಲಿ ಪೊಲೀಸರು ನಿಷ್ಪಕ್ಷಪಾತ ವಿಚಾರಣೆ ನಡೆಸುತ್ತಿದ್ದಾರೆ. ಇದರಲ್ಲಿ ರಾಜಕೀಯದ ಹುನ್ನಾರವಿಲ್ಲ ಎಂದು ಹೇಳಿದ್ದಾರೆ.
ದೆಹಲಿ ಸರೋಜಿನಿ ನಗರ ಪೊಲೀಸರು ಸುನಂದಾ ಪುಷ್ಕರ್ ಅಸಹಜ ಸಾವು ಎಂದು ಹೇಳಿದ್ದು, ಪ್ರಕರಣವನ್ನು ಐಪಿಸಿ 302 ಅಡಿ ಕೊಲೆ ಎಂದು ದಾಖಲಿಸಿಕೊಂಡಿದ್ದರು. ಎಫ್ಐಆರ್ನಲ್ಲಿ ಯಾರ ಹೆಸರನ್ನು ಪ್ರಸ್ತಾಪಿಸದೇ, ಅಪರಿಚಿತ ವ್ಯಕ್ತಿಗಳಿಂದ ಕೊಲೆ ನಡೆದಿದೆ ಎಂದು ನಮೂದಿಸಿಕೊಂಡಿದ್ದರು. ದೆಹಲಿ ಉಪ ಪೊಲೀಸ್ ಆಯುಕ್ತ ಪ್ರೇಮನಾಥ್ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ(ಎಸ್ಐಟಿ)ವನ್ನು ರಚಿಸಿದ್ದು, ತನಿಖೆ ಕೈಗೊಂಡಿದೆ.