Untitled Document
Sign Up | Login    
Dynamic website and Portals
  
January 17, 2015

ಸರ್ಕಾರಿ ಕಚೇರಿ ಕೆಲಸಕ್ಕೆ ಖಾಸಗಿ ವಾಹನ ಬಳಕೆ:ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಕ್ರಮ

ನವದೆಹಲಿ : ಕಚೇರಿ ಕೆಲಸಕ್ಕೆ ಖಾಸಗಿ ವಾಹನಗಳನ್ನು ಬಳಸಿಕೊಳ್ಳುತ್ತಿದ್ದ ಪರಿಣಾಮ ಸರ್ಕಾರಿ ಕಚೇರಿಗಳ ವಿರುದ್ಧ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ಸರ್ಕಾರಿ ಬ್ಯಾಂಕ್‌ ಗಳು, ಕೇಂದ್ರ ಸರ್ಕಾರಿ ಕಚೇರಿ, ರಾಜ್ಯ ಸರ್ಕಾರಿ ಕಚೇರಿಗಳು ಖಾಸಗಿ ವಾಹನಗಳನ್ನು ಬಾಡಿಗೆಗೆ ಪಡೆದು, ಅವುಗಳ ಮೇಲೆ ಇಲಾಖೆ ಹೆಸರು ಹಾಕಿಕೊಂಡು ಬಳಸಿಕೊಳ್ಳುತ್ತಿದ್ದವು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಕಚೇರಿಗಳಿಗೆ ದಂಡ ವಿಧಿಸಿದ್ದಾರೆ.

ಸರ್ಕಾರಿ ಕೆಲಸಕ್ಕೆ ಈ ರೀತಿ ಖಾಸಗಿ ವಾಹನಗಳನ್ನು ಬಳಸಿಕೊಳ್ಳುವುದು ಕಾನೂನು ಬಾಹಿರವಾಗಿದ್ದು, ಈ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಸಾರಿಗೆ ಇಲಾಖೆ ಜಂಟಿ ಆಯುಕ್ತ ನರೇಂದ್ರ ಹೋಲ್ಕರ್ ಹಾಗೂ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 5೦ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಸಂಬಂಧಪಟ್ಟ ಕಚೇರಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ. ಈ ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ಹೋಲ್ಕರ್ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited