Untitled Document
Sign Up | Login    
Dynamic website and Portals
  
January 18, 2015

ಹಿಂದೂ ಮಹಿಳೆಯರು 10 ಮಕ್ಕಳನ್ನು ಹೆರಬೇಕು: ಶಂಕರಾಚಾರ್ಯ ವಸುದೇವಾನಂದ ಸ್ವಾಮೀಜಿ

ಅಲಹಾಬಾದ್ : ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕೆಂದು ಬದ್ರಿಕಾಶ್ರಮದ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ ಸ್ವಾಮೀಜಿ ಕರೆನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಅಲಹಾಬಾದ್‌ನಲ್ಲಿ ನಡೆಯುತ್ತಿರುವ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳೇ ಬಹುಸಂಖ್ಯಾತರಾಗಬೇಕಿತ್ತು. ಇತ್ತೀಚಿನ ದಿನಗಳಲ್ಲಿ ನಮ್ಮ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ನಾವೇ ಅಲ್ಪಸಂಖ್ಯಾತರಾಗುತ್ತಿದ್ದೇವೆ ಎಂದು ವಿಷಾದಿಸಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಹಿಂದೂಧರ್ಮವನ್ನು ಉಳಿಸಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 4 ಮಕ್ಕಳ ಬದಲಿಗೆ 10 ಮಕ್ಕಳನ್ನು ಹೆರಬೇಕು. ಇದರಿಂದ ಭಾರತ ಹಿಂದೂರಾಷ್ಟ್ರವಾಗಿ ಉಳಿಯುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಘರ್ ವಾಪಸಿ ಬಗ್ಗೆ ಮಾತನಾಡಿರುವ ಅವರು, ಕ್ರಿಶ್ಚಿಯನ್, ಇಸ್ಲಾಂ, ಸಿಖ್ ಸೇರಿದಂತೆ ಎಲ್ಲ ಧರ್ಮಗಳಲ್ಲೂ ಮತಾಂತರಗೊಂಡವರು ತಮ್ಮ ತಮ್ಮ ಧರ್ಮಕ್ಕೆ ಹಿಂತಿರುಗುತ್ತಿದ್ದಾರೆ. ಅದರಲ್ಲಿ, ಹಿಂದೂ ಧರ್ಮದಿಂದ ಮತಾಂತರಗೊಂಡವರು ಪುನಃ ಅದೇ ಧರ್ಮಕ್ಕೆ ಬರುವುದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited