Untitled Document
Sign Up | Login    
Dynamic website and Portals
  
January 18, 2015

ಯೋಧರ ಗುಂಡೇಟಿಗೆ ಇಬ್ಬರು ಉಗ್ರರು ಬಲಿ

ಶ್ರೀನಗರ : ಉತ್ತರ ಕಾಶ್ಮೀರದ ಸೋಪೋರ್‌ನಲ್ಲಿ ಬೆಳಿಗ್ಗೆ ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದಾರೆ.

ಜಮ್ಮು-ಕಾಶ್ಮೀರದ ಸೋಪುರ್ ಪ್ರದೇಶದಲ್ಲಿ ಜೆಎಂ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯೋಧರು ಇಡೀ ಪ್ರದೇಶವನ್ನು ಸುತ್ತುವರಿದಿದ್ದರು. ಈ ಸಂದರ್ಭದಲ್ಲಿ ಉಗ್ರರು ಸೇನಾ ಪಡೆ ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ನಿರಂತರ ಗುಂಡಿನ ಕಾಳಗದ ನಂತರ ಇಬ್ಬರು ಉಗ್ರರು ಬಿಎಸ್‌ಎಫ್ ಯೋಧರ ಗುಂಡಿಗೆ ಬಲಿಯಾದ್ದಾರೆ. ಸೋಪುರ್ ಜಿಲ್ಲೆಯ ಸೈದಾಪುರವನ್ನು ಸುತ್ತುವರಿದಿರುವ ಸೇನಾ ಪಡೆ ಇನ್ನೂ ಯಾರಾದರೂ ಉಗ್ರರಿರಬಹುದೇ ಎಂದು ಶೋಧಿಸುತ್ತಿದ್ದಾರೆ. ಉಗ್ರರಿಬ್ಬರು ಅಡಗಿದ್ದ ಮನೆಯನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗಿದೆ. ಇತ್ತೀಚೆಗೆ ಗಡಿ ಭಾಗದಲ್ಲಿ ಉಗ್ರರ ಒಳನುಸುಳುವಿಕೆ ಹೆಚ್ಚುತ್ತಿದ್ದು, ಸಮೀಪದ ಹಳ್ಳಿಗಳ ನಿವಾಸಿಗಳು ಆತಂಕಗೊಂಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited