Untitled Document
Sign Up | Login    
Dynamic website and Portals
  
January 20, 2015

ಬೆಂಗಳೂರಿನಲ್ಲಿ ಫ್ಲೆಕ್ಸ್, ರಾಜ್ಯಾದ್ಯಂತ ಪ್ಲಾಸ್ಟಿಕ್ ನಿಷೇಧಕ್ಕೆ ತೀರ್ಮಾನ

BW News Bureau : ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಗಳನ್ನು ನಿಷೇಧಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಅಂತೆಯೇ, ರಾಜ್ಯವ್ಯಾಪೀ ಪ್ಲಾಸ್ಟಿಕ್ ಕೈಚೀಲಗಳನ್ನೂ ನಿಷೇಧಿಸುವ ನಿರ್ಧಾರವನ್ನೂ ಕೂಡಾ ಸರ್ಕಾರ ಕೈಗೊಂಡಿದೆ.

ಪ್ಲಾಸ್ಟಿಕ್ ಕೈಚೀಲಗಳ ನಿಷೇಧ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೊದಲಿಗೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಬಿಬಿಎಂಪಿ ಅಧಿಕಾರಿಗಳ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯವನ್ನು ಪ್ರಕಟಿಸಿದ್ದಾರೆ.

ಇತ್ತೀಚೆಗೆ ನಗರದಲ್ಲಿ ಫ್ಲೆಕ್ಸ್ ಗಳ ಹಾವಳಿ ಹೆಚ್ಚಾಗಿದೆ. ಇದರ ಬಗ್ಗೆ ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ಲೋಕಾಯುಕ್ತರಿಂದಲೂ ಅಸಮಾಧಾನ ವ್ಯಕ್ತವಾಗಿದೆ. ಸಾರ್ವಜನಿಕರಿಂದಲೂ ತೀವ್ರ ಆಕ್ಷೇಪ ಬಂದಿದೆ. ಈ ಹಿನ್ನೆಲೆಯಲ್ಲಿ ನಿಷೇಧದ ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಸಧ್ಯದಲ್ಲಿಯೇ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಸರ್ಕಾರಿ ಆದೇಶ ಹೊರಬಿದ್ದ ಕೂಡಲೇ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್ ಗಳನ್ನು ಹಾಕುವಂತಿಲ್ಲ. ಇದಕ್ಕಾಗಿಯೇ ಪರವಾನಗಿ ಹೊಂದಿದ ಜಾಹೀರಾತು ಫಲಕಗಳನ್ನು ಬಳಸಿಕೊಳ್ಳಬಹುದು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ, ಫ್ಲೆಕ್ಸ್ ಹಾಕಿದವರೂ ಹಾಗೂ ಫ್ಲೆಕ್ಸ್ ಮುದ್ರಿಸಿದವರೂ, ಈ ಇಬ್ಬರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ, ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ, ಪ್ಲಾಸ್ಟಿಕ್ ಕೈಚೀಲ ನಿಷೇಧಿಸುವ ಸರ್ಕಾರದ ಕ್ರಮಕ್ಕೆ ಸಾರ್ವಜನಿಕರೂ ಸಹಕಾರ ನೀಡಬೇಕು. ಹೊರ ರಾಜ್ಯಗಳಿಂದ ಬರುವ ಪ್ಲಾಸ್ಟಿಕ್ ಕೈಚೀಲಗಳನ್ನು ತಡೆಯುವ ವಿಚಾರದಲ್ಲೂ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited