Untitled Document
Sign Up | Login    
Dynamic website and Portals
  
January 21, 2015

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿಯೊಂದಿಗೆ ಭಾಗವಹಿಸಲಿರುವ ಬರಾಕ್ ಒಬಾಮ

ನರೇಂದ್ರ ಮೋದಿ-ಬರಾಕ್ ಒಬಾಮ ನರೇಂದ್ರ ಮೋದಿ-ಬರಾಕ್ ಒಬಾಮ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರೇ ರೇಡಿಯೋದಲ್ಲಿ ನಡೆಸಿಕೊಡಲಿರುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಈಬಾರಿ ಎಂದಿಗಿಂತಲೂ ಭಿನ್ನವಾಗಿರಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ&id=16978'>ಬರಾಕ್ ಒಬಾಮ ಸಹ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವುದು ಈ ಬಾರಿಯ ಕಾರ್ಯಕ್ರಮವನ್ನು ಮತ್ತಷ್ಟು ವಿಶೇಷಗೊಳಿಸಲಿದೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ನರೇಂದ್ರ ಮೋದಿ-ಬರಾಕ್ ಒಬಾಮ&id=16978'>ಬರಾಕ್ ಒಬಾಮ ಇಬ್ಬರೂ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಜಂಟಿಯಾಗಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಯುಎಸ್ ನಲ್ಲಿ ಒಬಾಮ ಸಹ ಪ್ರತಿ ವಾರವೂ ರೇಡಿಯೋ ಮೂಲಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡುತ್ತಾರೆ. ಅಂತೆಯೇ ನರೇಂದ್ರ ಮೋದಿ ಅವರೂ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ದೇಶದ ಜನತೆಯೊಂದಿಗೆ ಮಾತನಾಡುವ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.

ಈ ವರೆಗೂ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೂರು ಬಾರಿ ದೇಶದ ಜನತೆಯೊಂದಿಗೆ ವಿವಿಧ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ರೇಡಿಯೋದಲ್ಲಿ ಪ್ರಸಾರವಾಗುವ ಈ ಕಾರ್ಯಕ್ರಮ ಭಾರತದಲ್ಲಿ ಅತಿ ಹೆಚ್ಚು ಜನಪ್ರಿಯತೆ ಗಳಿಸಿದ್ದು, ಈ ಬಾರಿ ಗಣರಾಜ್ಯೋತ್ಸವದ ಅತಿಥಿಯಾಗಿ ಭಾಗವಹಿಸುತ್ತಿರುವ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ&id=16978'>ಬರಾಕ್ ಒಬಾಮ ಸಹ ಮೋದಿ ಅವರೊಂದಿಗೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಕಾರ್ಯಕ್ರಮಕ್ಕೆ ಮತ್ತಷ್ಟು ಮರುಗು ಮೂಡಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited