BW News Bureau : 'ಬಿಬಿಎಂಪಿ' ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ ಪಾಲಿಕೆ ಸದಸ್ಯರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜ.21ರಂದು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ ಪಾಲಿಕೆ ಸದಸ್ಯರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಇಷ್ಟೊಂದು ಕಳಪೆ ಗುಣಮಟ್ಟದ ಕಾಮಗಾರಿಯನ್ನು ಈವರೆಗೂ ನೋಡಿಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿಗಳ ಗುಣಮಟ್ಟ ಕಳಪೆಯಾಗಿರುತ್ತವೆ. ಕಾಮಗಾರಿಗಳು ಕಡಿಮೆಯಾದರೂ ಪರವಾಗಿಲ್ಲ ಕಾಮಗಾರಿಗಳ ಗುಣಮಟ್ಟ ಹೆಚ್ಚಿರಬೇಕು ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ. ಹೆಚ್ಚು ಕೆಲಸಕ್ಕಿಂತಲೂ ಗುಣಮಟ್ಟ ಮುಖ್ಯ. ಕಾಮಗಾರಿಗಳ ಗುಣಮಟ್ಟದ ಬಗ್ಗೆ ಪಾಲಿಕೆ ಸದಸ್ಯರು ಹಾಗೂ ಎಂಜಿನಿಯರ್ ಗಳು ಗಮನ ಹರಿಸಬೇಕು ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.