ನವದೆಹಲಿ : 'ಭಾರತ'ದ ನಾಲ್ಕು ಮಹಾನಗರಗಳಲ್ಲಿ ಜ.28ರೊಳಗಾಗಿ ದಾಳಿ ನಡೆಸುವುದಕ್ಕಾಗಿ ಪಾಕಿಸ್ತಾನ ಉಗ್ರರ ನಾಲ್ಕು ತಂಡಗಳನ್ನು ಭಾರತಕ್ಕೆ ರವಾನೆ ಮಾಡಿದೆ ಎಂದು ತಿಳಿದುಬಂದಿದೆ.
ಗಣರಾಜ್ಯೋತ್ಸವದಂದು ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿದ್ದು ವಿಧ್ವಂಸಕ ಕೃತ್ಯ ನಡೆದರೆ ಅದಕ್ಕೆ ಪಾಕಿಸ್ತಾನವೇ ನೇರ ಹೊಣೆಯಾಗಲಿವೆ ಎಂದು ಅಮೆರಿಕಾ ಎಚ್ಚರಿಕೆ ನೀಡಿತ್ತು. ಎಚ್ಚರಿಕೆ ಹೊರತಾಗಿಯೂ ಪಾಕಿಸ್ತಾನ ಭಾರತಕ್ಕೆ ಉಗ್ರರ ನಾಲ್ಕು ತಂಡ ರವಾನೆ ಮಾಡುವ ದುಸ್ಸಾಹಸಕ್ಕೆ ಕೈಹಾಕಿದೆ.
ಲಷ್ಕರ್-ಎ-ತೋಯ್ಬಾ, ಹಿಜ್ಬುಲ್ ಮುಜಾಹಿದ್ದೀನ್, ಜೈಶ್-ಇ-ಮೊಹಮ್ಮದ್, ಜಮಾತ್-ಉದ್-ದವಾ ಉಗ್ರ ಸಂಘಟನೆಗಳು ಮಹಾರಾಷ್ಟ್ರ, ಒಡಿಶಾ, ಉತ್ತರ ಪ್ರದೇಶ, ರಾಜಸ್ಥಾನಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದು ಈ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಬರಾಕ್ ಒಬಾಮ ಭಾರತಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಗ್ರರು ಭಾರತದ ಮಹಾನಗರಗಳಲ್ಲಿ ದಾಳಿ ನಡೆಸಲು ಯೋಜನೆ ರೂಪಿಸಿದ್ದಾರೆ.