BW News Bureau : 'ಒಎಂಸಿ' ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಜೈಲಿನಿಂದ ಜ.22ರಂದು ಬಿಡುಗಡೆಯಾಗಲಿದ್ದಾರೆ.
ರೆಡ್ದಿ ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಜನಾರ್ದನ ರೆಡ್ಡಿ ಅವರ ಜಮೀನು ಪ್ರತಿ ದೊರೆತಿದ್ದು ಅವರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಜೈಲಿನಿಂದ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇದಾಜ್ನೆ ಜಾರಿ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ 500ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಸೆಕ್ಷನ್ 144ಅಡಿ ನಿಷೇದಾಜ್ನೆ ವಿಧಿಸಲಾಗಿದೆ ಎಂದು ಆಗ್ನೇಯ ವಲಯ ಡಿಸಿಪಿ ರೋಹಿಣಿ ಮಾಹಿತಿ ನೀಡಿದ್ದಾರೆ.
ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಜ.20ರಂದು ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ತಮ್ಮ ನಾಯಕ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಭುಮಾನಿಗಳು ಬೆಳಿಗ್ಗಿನಿಂದಲೇ ಜೈಲಿನ ಮುಂಭಾಗದಲ್ಲಿ ರೆಡ್ಡಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.