ನವದೆಹಲಿ : ಐಪಿಎಲ್ (ಇಂಡಿಯನ್ ಪ್ರಿಮಿಯರ್ ಲೀಗ್) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅಳಿಯ ಗುರುನಾಥ್ ಮೇಯಪ್ಪನ್ ಮತ್ತು ರಾಜಸ್ತಾನ ರಾಯಲ್ಸ್ನ ಸಹ ಮಾಲೀಕ ರಾಜ್ ಕುಂದ್ರಾ ತಪ್ಪಿತಸ್ಥರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ 130 ಪುಟಗಳ ತೀರ್ಪನ್ನು ಪ್ರಕಟಿಸಿದೆ. ಮೇಯಪ್ಪನ್ ಹಾಗೂ ಕುಂದ್ರಾ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಗೆ ಭಾರೀ ಹಿನ್ನಡೆ ಉಂಟಾಗಿದೆ. ಶ್ರೀನಿವಾಸನ್ ವಿರುದ್ಧ ಸ್ವಹಿತಾಸಕ್ತಿ ಸಾಬೀತಾದ ಹಿನ್ನಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸ್ಥಾನದ ಚುನಾವಣೆಗೆ ಶ್ರೀನಿವಾಸನ್ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜ್ ಕುಂದ್ರಾ ಸಹಮಾಲಿಕತ್ವದ ರಾಜಸ್ಥಾನ ರಾಯಲ್ಸ್ ತಂಡಗಳನ್ನು ಐಪಿಎಲ್ ನಿಂದ ಹೊರಗಿಡಲಾಗಿದೆ.