Untitled Document
Sign Up | Login    
Dynamic website and Portals
  
January 23, 2015

ಬಿಹಾರದಲ್ಲಿ ಬಾಂಬ್ ಸ್ಫೋಟ: ಇಬ್ಬರು ಬಲಿ

ಪಾಟ್ನಾ : ಬಿಹಾರದ ನ್ಯಾಯಾಲಯವೊಂದರ ಬಳಿ ಬಾಂಬ್ ಸ್ಫೋಟ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಇಲ್ಲಿನ ಅರಾ ನಗರದಲ್ಲಿನ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ ಓರ್ವ ಮಹಿಳೆ ಹಾಗೂ ಓರ್ವ ಪೊಲೀಸ್ ಪೇದೆ ಸಾವು, 7 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋರ್ಟ್ ನ ಆವರಣದಲ್ಲಿ ಮಹಿಳೆಯೊಬ್ಬಳು ತನ್ನನ್ನು ತಾನೇ ಸ್ಫೋಟಿಸಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಈ ಮಹಿಳೆ ಯಾರು ಎಂಬ ಬಗ್ಗೆ ಈ ವರೆಗೆ ಮಾಹಿತಿ ಸಿಕ್ಕಿಲ್ಲ. ಮಹಿಳೆಯೊಬ್ಬಳು ಬ್ಯಾಗ್ ಒಂದರಲ್ಲಿ ಬಾಂಬ್ ಇರಿಸಿಕೊಂಡಿದ್ದಳು. ಅದು ಸ್ಫೋಟಗೊಂಡ ಪರಿಣಾಮ ಈ ಘಟನೆ ನಡೆದಿದೆ.

ಮಹಿಳೆ ತನ್ನನ್ನು ತಾನು ಸ್ಫೋಟಿಸಿಕೊಂಡಳೇ ಅಥವಾ ಬಾಂಬ್ ನ್ನು ಒಂದುಕಡೆಯಿಂದ ಇನ್ನೊಂದು ಕಡೆ ಸಾಗಿಸುವಾಗ ಬಾಂಬ್ ಸ್ಫೋಟ ಗೊಂಡಿದೆಯೇ ಎಂಬ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited