Untitled Document
Sign Up | Login    
Dynamic website and Portals
  
January 24, 2015

ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನ ಬಂಧನ

BW News Bureau : ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು ಕಾಟನ್‌ಪೇಟೆಯಲ್ಲಿ ಅಡಗಿದ್ದ ಶಂಕಿತ ಬೋಡೋ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತನು ನಾಗಾಲ್ಯಾಂಡ್ ಮೂಲದವನೆಂದು ತಿಳಿದುಬಂದಿದೆ.

ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಉಗ್ರರು ವಿವಿಧ ನಗರಗಳಲ್ಲಿ ದಾಳಿ ನಡೆಸುವ ಕುರಿತು ಜ.23ರಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸರು ಶಂಕಿತ ಬೋಡೋ ಉಗ್ರನನ್ನು ಬಂಧಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಿರುವುದರಿಂದ ಜಮ್ಮು-ಕಾಶ್ಮೀರ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರರು ದಾಳಿ ನಡೆಸಬಹುದು ಎಂದು ಎಚ್ಚರಿಕೆ ನೀಡಲಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited