Untitled Document
Sign Up | Login    
Dynamic website and Portals
  
January 24, 2015

ನಂಜಂಡಪ್ಪ ವರದಿ ಶಿಫಾರಸ್ಸು ಅನುಷ್ಠಾನಕ್ಕೆಉನ್ನತಾಧಿಕಾರ ಸಮಿತಿ ರಚನೆ

ಬೆಂಗಳೂರು : ಆರ್ಥಿಕ ಹಾಗೂ ಶಿಕ್ಷಣ ತಜ್ಞ ಡಾ ಡಿ.ಎಂ.ನಂಜಂಡಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತಾಧಿಕಾರ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸಂಡೂರಿನ ವೆಂಕಟರಾವ್ ಘೋರ್ಷಡೆ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರು, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಈ ಸಮಿತಿಯ ಇತರೆ ಸದಸ್ಯರಾಗಿದ್ದಾರೆ. ಈ ಸಮಿತಿಯ ಪದಾವಧಿ 18 ತಿಂಗಳದ್ದಾಗಿರುತ್ತದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited