Untitled Document
Sign Up | Login    
Dynamic website and Portals
  
January 25, 2015

ಭಾರತ-ಅಮೆರಿಕ ಮಹತ್ವದ ಒಪ್ಪಂದಗಳಿಗೆ ಸಹಿ

ಹೈದರಾಬಾದ್ ಹೌಸ್‌ನಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮತ್ತು ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್ ಹೌಸ್‌ನಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮತ್ತು ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮತ್ತು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.

ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಜಂಟಿ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾಗರಿಕ ಪರಮಾಣು ಸೇರಿದಂತೆ ಭದ್ರತೆ ಮತ್ತು ರಕ್ಷಣಾ ಕ್ಷೇತ್ರಗಳ ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದು ತಿಳಿಸಿದರು.

ಬರಾಕ್ ಒಬಾಮ ಭಾರತಕ್ಕೆ ಭೇಟಿ ನೀಡಿರುವುದು ಭಾರತ ಮತ್ತು ಅಮೆರಿಕದ ಬಾಂಧವ್ಯ ವೃದ್ಧಿಗೆ ಪೂರಕವಾಗಲಿದೆ ಎಂದರು. ಅಲ್ಲದೇ ಭಾರತ ಪ್ರವಾಸ ಕೈಗೊಂಡಿರುವ ಬರಾಕ್ ಒಬಾಮರಿಗೆ ಅಭಿನಂದನೆ ಸಲ್ಲಿಸಿದರು.

ಉಭಯ ದೇಶಗಳ ನಡುವೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಅದರಂತೆ 6 ವರ್ಷಗಳ ಹಳೆಯ ನಾಗರಿಕ ಪರಮಾಣು ಒಪ್ಪಂದ ಜಾರಿಯಾಗುತ್ತಿರುವುದಕ್ಕೆ ಮೋದಿ ಸಂತಸ ವ್ಯಕ್ತಪಡಿಸಿದರು. ರಕ್ಷಣಾ ಕ್ಷೇತ್ರದ ಒಪ್ಪಂಗಳ ನವೀಕರಣಕ್ಕೆ ಸಮ್ಮತಿ, ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ವ್ಯವಹಾರದಲ್ಲಿ ಪ್ರಗತಿ ಕುರಿತಂತೆ ಹಲವು ಒಡಂಬಡಿಕೆಗಳಿಗೆ ಸಹಿ ಹಾಕಲಾಗಿದೆ ಎಂದರು.

ಪೋಟೋ ಕೃಪೆ: www.pmindia.nic.in

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited