ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೋಳಿ ಇಬ್ಬರೂ ಆತ್ಮೀಯರು, ಸಿಎಂ ಗೆ ಜಾರಕಿಹೊಳಿ ಸಹಾಯ ಮಾಡಿದ್ದಾರೆ ಎಂದು ಮಾಜಿ ಸಂಸದ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿರುವುದರ ಹಿನ್ನೆಲೆಯಲ್ಲಿ ಜ.28ರಂದು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಂಪುಟ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಹೆಚ್. ವಿಶ್ವನಾಥ್, ರಾಜೀನಾಮೆ ವಾಪಸ್ ಪಡೆಯುವ ವಿಷಯದಲ್ಲಿ ಮಧ್ಯವರ್ತಿಗಳ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಸಚಿವ ಜಾರಕಿಹೊಳಿ ಅಬಕಾರಿ ಇಲಾಖೆ ಹೊರತುಪಡಿಸಿ ಯಾವುದಾದರೂ ಸಮಾಜಮುಖಿ ಖಾತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ಆತ್ಮೀಯರಾಗಿರುವುದರಿಂದ ನೇರವಾಗಿ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ ಎಂದು ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ.
ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಸಚಿವ ಡಿ.ಕೆ ಶಿವಕುಮಾರ್, ಹೆಚ್.ವಿಶ್ವನಾಥ್, ಸಚಿವ ಹೆಚ್.ಎಸ್ ಮಹದೇವ ಪ್ರಸಾದ್ ಭಾಗವಹಿಸಿದ್ದರು.