Untitled Document
Sign Up | Login    
Dynamic website and Portals
  
January 28, 2015

ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ, ಬಿಜೆಪಿ ಸರ್ಕಾರ ರಚನೆ ಸಾಧ್ಯತೆ

ನವದೆಹಲಿ : 'ರಾಜ್ಯಪಾಲರ ಆಡಳಿತ' ಇರುವ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಹಾಗೂ ಬಿಜೆಪಿ ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ.

ಜ.28ರಂದು ಪ್ರಕಟವಾದ ವರದಿಗಳ ಪ್ರಕಾರ, ಜನವರಿ ಅಂತ್ಯದ ವೇಳೆಗೆ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಬಿಜೆಪಿ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಸ್ಥಾನ ಹಂಚಿಕೆ ಬಗ್ಗೆ ಈಗಾಗಲೆ ಮಾತುಕತೆ ನಡೆದಿದ್ದು, ಉಭಯ ಪಕ್ಷಗಳ ನಾಯಕರು ಶೀಘ್ರವೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಸರ್ಕಾರ ರಚನೆ ವದಂತಿಗಳಿಗೆ ಪೂರಕವಾಗಿ ಜಮ್ಮು-ಕಾಶ್ಮೀರದಲ್ಲಿ ರಾಜ್ಯಸಭಾ ಚುನಾವಣೆಗೆ ನಾಲ್ಕು ಸ್ಥಾನಗಳಿಗೆ ಬಿಜೆಪಿ-ಪಿಡಿಪಿ ಹೊಂದಾಣಿಕೆ ಮಾಡಿಕೊಂಡಿವೆ ಎಂದು ತಿಳಿದುಬಂದಿದೆ.

ಸಂಜೆ ವೇಳೆ ಬಿಜೆಪಿ ನಾಯಕ ರಾಮ್ ಮಾಧವ್ ನೇತೃತ್ವದಲ್ಲಿ ಬಿಜೆಪಿ ಶಾಸಕರ ಸಭೆ ನಡೆಯಲಿದೆ. ರಾಜ್ಯವನ್ನು ದುರವಸ್ಥೆಯಿಂದ ಹೊರತರಲು ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಪಿಡಿಪಿ ಮುಂದಾಗಿದೆ ಎಂದು ಹೇಳಲಾಗಿದೆ.

ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯಿಸಿರುವ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರೆ ಅದಕ್ಕೆ ತಾವು ಸಿದ್ಧ ಎಂಬ ಹೇಳಿಕೆ ನೀಡಿದ್ದಾರೆ. ಡಿಸೆಂಬರ್ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಿಡಿಪಿಗೆ 28 ಸ್ಥಾಗಳು ದೊರೆತಿದ್ದವು, 25 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಸರ್ಕಾರ ರಚನೆ ಸಂಬಂಧ ಮಾತುಕತೆ ವಿಫಲವಾಗಿದ್ದ ಕಾರಣ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಹೇರಲಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited