Untitled Document
Sign Up | Login    
Dynamic website and Portals
  
January 29, 2015

ರಾಮ ಮಂದಿರ ನಿರ್ಮಾಣ: ವಿಶ್ವಹಿಂದೂ ಪರಿಷತ್ ನಿಂದ ದೇಶಾದ್ಯಂತ ರಾಮಮಹೋತ್ಸವ ಆಯೋಜನೆ

ಲಖ್ನೌ : 'ಅಯೋಧ್ಯೆ'ಯಲ್ಲಿ ರಾಮ ಮಂದಿರ ನಿರ್ಮಿಸುವ ಸಂಬಂಧ ವಿಶ್ವಹಿಂದೂ ಪರಿಷತ್ ಸಂಘಟನೆ, ದೇಶಾದ್ಯಂತ ರಾಮ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ.

ಮಾರ್ಚ್ 21ಅಥವಾ 22ರಿಂದ ದೇಶಾದ್ಯಂತ ರಾಮ ಮಹೋತ್ಸವ ಪ್ರಾರಂಭವಾಗಲಿದ್ದು ಏಪ್ರಿಲ್ 1 ವರೆಗೆ ನಡೆಯಲಿದೆ ಎಂದು ವಿಶ್ವಹಿಂದೂ ಪರಿಷತ್ ನ ಮಾಧ್ಯಮ ವಿಭಾಗದ ಮುಖ್ಯಸ್ಥ ಶರದ್ ಶರ್ಮಾ ಹೇಳಿದ್ದಾರೆ. ರಾಮ ಮಹೋತ್ಸವವನ್ನು ದೇಶದ ಪ್ರತಿ ಗ್ರಾಮದಲ್ಲೂ ಆಚರಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಮ ಮಹೋತ್ಸವ ಕಾರ್ಯಕ್ರಮ ರಾಮಜನ್ಮಭೂಮಿ ಚಳುವಳಿಗೆ ಮತ್ತಷ್ಟು ಬಲ ನೀಡಲಿದೆ ಎಂದು ಶರದ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ. ಈ ಕಾರ್ಯಕ್ರಮದಲ್ಲಿ ಎರಡು ಅಡಿ ಉದ್ದದ ರಾಮನ ವಿಗ್ರಹಗಳನ್ನು ಪೂಜಿಸಲಾಗುತ್ತದೆ ಎಂದು ವಿಶ್ವಹಿಂದೂ ಪರಿಷತ್ ತಿಳಿಸಿದೆ. ರಾಮ ಮಂದಿರ ನಿರ್ಮಾಣಕ್ಕೆ ಹಿಂದೂಗಳು ಬೆಂಬಲಿಸುತ್ತಿದ್ದಾರೆ ಆದರೆ ಆ ಚಳುವಳಿ ಮತ್ತಷ್ಟು ಬಲಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ರಾಮ ಮಹೋತ್ಸವವನ್ನು ಪ್ರಾರಂಭಿಸಲಾಗುತ್ತದೆ ಎಂದು ವಿ.ಹೆಚ್.ಪಿ ಹೇಳಿದೆ. ವಿ.ಹೆಚ್.ಪಿ, ರಾಮ ಮಹೋತ್ಸವದ ಮೂಲಕ ದೇಶಾದ್ಯಂತ 1.5 ರಿಂದ 2 ಲಕ್ಷ ಗ್ರಾಮಗಳನ್ನು ತಲುಪುವ ಗುರಿ ಹೊಂದಿದೆ.

ಈ ಕಾರ್ಯಕ್ರಮ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್ ನಲ್ಲಿ ಪ್ರತಿಯೊಂದು ಗ್ರಾಮವನ್ನು ತಲುಪಲು ಯೋಜನೆ ರೂಪಿಸಿರುವುದಾಗಿ ಶರದ್ ಶರ್ಮಾ ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited