ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವುದಕ್ಕೆ ಆತುರ ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜ29ರಂದು ವಿಧಾನಸೌಧದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಸುವುದರಲ್ಲಿ ಆತುರ ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಿದ್ದರಾಮಯ್ಯ ನಡೆಸಿರುವ ಡಿನೋಟಿಫಿಕೇಶನ್ ಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳ ಅಧ್ಯಯನ ಮಾಡುವುದೇ ಸಾಹಸ ಆದ್ದರಿಂದ ದಾಖಲೆಗಳನ್ನು ಅಧ್ಯಯನ ಮಾಡಬೇಕು ಎಂದು ಹೇಳಿದ್ದಾರೆ. ಅಲ್ಲದೇ ಡಿನೋಟಿಫಿಕೇಶನ್ ಪ್ರಕರಣದ ಸಂಬಂಧ ಶೀಘ್ರವೇ ಪುಸ್ತಕವನ್ನು ಹೊರತರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಸಿದ್ದರಾಮಯ್ಯಗೂ ತಮಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಾನೇನು ಸಿದ್ದರಾಮಯ್ಯ ಅವರ ಆಸ್ತಿಯನ್ನು ಹಚಿಕೊಳ್ಳಬೇಕಿಲ್ಲ. ಅವರು ಏನು ಬೇಕಾದರೂ ಹೇಳಿಕೊಳ್ಳಲಿ ನಾನು ವಿರೋಧ ಪಕ್ಷದ ಶಾಸಕನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.