Untitled Document
Sign Up | Login    
Dynamic website and Portals
  
January 30, 2015

ದೆಹಲಿ ಚುನಾವಣೆ: ಬಿಜೆಪಿ ಪ್ರಣಾಳಿಕೆಯಿಲ್ಲ; ಕೇಜ್ರಿವಾಲ್ ಗೆ 5 ಪ್ರಶ್ನೆ

ನವದೆಹಲಿ : ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ವಿಷನ್ ಡಾಕ್ಯುಮೆಂಟ್(ದೂರದೃಷ್ಟಿಯ ದಾಖಲೆ)ಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಈ ವಿಷಯವನ್ನು ಬಿಜೆಪಿ ಮುಖಂಡ, ಕೇಂದ್ರ ಸಚಿವ ಅನಂತ್ ಕುಮಾರ್ ಸುದ್ದಿಗಾರರ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಮೋದಿಯವರು ಜನವರಿ 31, ಫೆ.1, 3 ಹಾಗೂ 4ರಂದು ರಾಜಧಾನಿಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೇ ಪ್ರತಿದಿನ ಅಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ 5 ಪ್ರಶ್ನೆಗಳನ್ನು ಫೆ.6ರವರೆಗೆ ಕೇಳುತ್ತೇವೆ ಎಂದು ದೆಹಲಿ ಬಿಜೆಪಿ ವರಿಷ್ಠ ಸತೀಶ್ ಉಪಾಧ್ಯಾಯ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಫೆ.7ರಂದು ದೆಹಲಿ ಚುನಾವಣೆ ನಡೆಯಲಿದ್ದು, ಫೆ.10ರಂದು ಮತಎಣಿಕೆ ನಡೆಯಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited