ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡಿರುವ ಜಯಂತಿ ನಟರಾಜನ್ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಪಕ್ಷದಲ್ಲಿ ತನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಜಯಂತಿ ನಟರಾಜನ್ ಸೊನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಪರಿಸರಖಾತೆಯಿಂದ ಅನುಮತಿ ಕೊಡಿಸಲು ರಾಹುಲ್ ಗಾಂಧಿ ಕಾರ್ಪೊರೇಟ್ ಕಂಪನಿಗಳ ಪರ ಲಾಭಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರನ್ನು ರಾಹುಲ್ ನಿಯಂತ್ರಿಸುತ್ತಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಅಲ್ಲದೇ ಒತ್ತಾಯ ಪೂರ್ವಕವಾಗಿ ನನ್ನಿಂದ ಸಚಿವೆ ಸ್ಥಾನಕ್ಕೆ ರಾಜಿನಾಮೆ ನೀಡಿಸಿದ್ದು, ಪಕ್ಷದ ನಾಯಕರಿಂದಲೇ ಸಂಕಷ್ಟ ಎದುರಿಸುದ್ದೇನೆ ಎಂದು ಜಯಂತಿ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಯುಪಿಎ ಸರ್ಕಾರದಲ್ಲಿ ಪರಿಸರ ಖಾತೆ ಸಚಿವರಾಗಿದ್ದ ಜಯಂತಿ ನಟರಾಜನ್ ಪರಿಸರ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆಯುತ್ತಾರೆ ಎಂಬು ಆರೋಪ ಕೇಳಿಬಂದಿತ್ತು. ಲೋಕಸಭಾ ಚುನಾವಣೆ ಸಂದರ್ಭಧಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ಮೇರೆಗೆ ಜಯಂತಿ ನಟರಾಜನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.