Untitled Document
Sign Up | Login    
Dynamic website and Portals
  
January 30, 2015

ರಾಜ್ಯಪಾಲರ ಹಿಂದಿ ಭಾಷಣಕ್ಕೆ ಕರವೇ ವಿರೋಧ

ಕರವೇ ಪ್ರತಿಭಟನೆ ಕರವೇ ಪ್ರತಿಭಟನೆ

ಬೆಂಗಳೂರು : ಫೆ.2ರಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲ ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಜ.29ರಂದು ನಡೆದ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಹಿಂದಿ ಹೇರಿಕೆಗೆ ನಿರಂತರವಾಗಿ ಪ್ರತಿರೋಧ ವ್ಯಕ್ತಪಡಿಸುತ್ತಿರುವ ಕರವೇ ಸದಸ್ಯರು, ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡಲು ಅವಕಾಶ ನೀಡಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ಕರವೇ ಅಧ್ಯಕ್ಷ ನಾರಾಯಣ ಗೌಡರ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ 150ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ವಿ.ಆರ್ ವಾಲ ಅವರು ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಪ್ರಥಮ ಬಾರಿಗೆ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಫೆ.2ರಂದು ವಿಧಾನಸಭೆ ಸಭಾಂಗಣದಲ್ಲಿ ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲರು ಸರ್ಕಾರದ ನಿಲುವು ಹಾಗೂ ಮುಂದಿನ ಒಂದು ವರ್ಷದ ಅವಧಿಯಲ್ಲಿ ಅನುಷ್ಠಾನಗೊಳ್ಳಲಿರುವ ಯೋಜನೆ ಹಾಗೂ ಕಾರ್ಯಕ್ರಮಗಳ ರೂಪುರೇಷೆ ಕುರಿತು ಭಾಷಣ ಮಾಡಲಿದ್ದಾರೆ. ಇದೇ ಪ್ರಥಮ ಬಾರಿಗೆ ರಾಜ್ಯಪಾಲರೊಬ್ಬರು ಹಿಂದಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited