Untitled Document
Sign Up | Login    
Dynamic website and Portals
  
January 30, 2015

ಜಮ್ಮು-ಕಾಶ್ಮೀರ ಸರ್ಕಾರ: ಪಿಡಿಪಿಗೆ ಸಿಎಂ ಹುದ್ದೆ, ಬಿಜೆಪಿಗೆ ಡಿಸಿಎಂ ಹುದ್ದೆ

ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿ-ಪಿಡಿಪಿ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದ್ದು ಪಿಡಿಪಿಗೆ ಪೂರ್ಣಾವಧಿ ಮುಖ್ಯಮಂತ್ರಿ ಸ್ಥಾನ ದೊರೆಯುವ ಸಾಧ್ಯತೆ ಇದೆ.

ಇತ್ತೀಚಿನ ವರದಿಗಳ ಪ್ರಕಾರ ಮುಖ್ಯಮಂತ್ರಿ ಸ್ಥಾನ ಪಿಡಿಪಿ ಪಾಲಾದರೆ, ಉಪಮುಖ್ಯಮಂತ್ರಿ ಸ್ಥಾನ ಬಿಜೆಪಿಗೆ ದೊರೆಯಲಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರಬಿಜೆಪಿಯಲ್ಲಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆದಿದೆ.

ಮೆಹಬೂಬಾ ಮುಫ್ತಿ ಪೂರ್ಣಾವಧಿ ಮುಖ್ಯಮಂತ್ರಿಯಾಗುವುದಕ್ಕೆ ಬಿಜೆಪಿ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಹುದ್ದೆಯನ್ನು ಹೊರತುಪಡಿಸಿ, ಪ್ರಮುಖ ಸಚಿವ ಖಾತೆಗಳೂ ಹಾಗೂ ಉಪಮುಖ್ಯಮಂತ್ರಿ ಹುದ್ದೆಗೆ ತೀವ್ರ ಪೈಪೋಟಿ ನಡೆಯುತ್ತಿದೆ.

ಸಮ್ಮಿಶ್ರ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಪಿಡಿಪಿ-ಬಿಜೆಪಿ ನಡುವಿನ ಮಾತುಕತೆ ಅಂತಿಮ ಹಂತಕ್ಕೆ ಬಂದಿದ್ದು, ಜಮ್ಮು-ಕಾಶ್ಮೀರಕ್ಕೆ ಶೀಘ್ರವೇ ಸ್ಥಿರ ಸರ್ಕಾರ ದೊರೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಹಾಗೂ ಶಾಸಕ ನಿರ್ಮಲ್ ಸಿಂಗ್ ಹೇಳಿದ್ದಾರೆ.

ಫೆ.15ರ ವೇಳೆಗೆ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರುವ ಸಾಧ್ಯತೆ ಇದೆ. ಉಭಯ ಪಕ್ಷಗಳಿಂದಲೂ 15 ಸಚಿವರು ಸರ್ಕಾರ ರಚನೆ ದಿನದಂದೇ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited