Untitled Document
Sign Up | Login    
Dynamic website and Portals
  
January 30, 2015

ಒತ್ತಾಯಪೂರ್ವಕ ಮತಾಂತರ ಸಹಿಸುವುದಿಲ್ಲ: ಮಮತಾ ಬ್ಯಾನರ್ಜಿ

ಮಮತಾ ಬ್ಯಾನರ್ಜಿ ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ರಾಜ್ಯದಲ್ಲಿ ಒತ್ತಾಯ ಪೂರ್ವಕ ಮತಾಂತರ ನಡೆದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಆಯೋಜಿಸಲಾಗಿದ್ದ ಮಿಲನ್ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಯಾವುದೇ ಸಂಘಟನೆಯ ಬಗ್ಗೆ ಮಾತನಾಡದೇ ಮತಾಂತರ ವಿಷಯವನ್ನು ಪ್ರಸ್ತಾಪಿಸಿದ್ದು, ಆಮಿಷವೊಡ್ಡುವ ಮೂಲಕ ಮತಾಂತರ ಮಾಡುವುದು ದೇಶದ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ. ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ಸಂವಿಧಾನದ ವಿರುದ್ಧವಾಗಿ ಮತಾಂತರ ನಡೆಯುತ್ತಿದ್ದರೆ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ನಮ್ಮದು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯ, ಸಂವಿಧಾನದಲ್ಲೂ ಇದನ್ನೇ ಉಲ್ಲೇಖಿಸಲಾಗಿದೆ. ಇಲ್ಲಿ ಯಾರನ್ನೂ ಬಲವಂತವಾಗಿ ಮತಾಂತರ ಮಾಡಲು ಅವಕಾಶವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಮಮತಾ ಬ್ಯಾನರ್ಜಿ, ನಿಮ್ಮದೂ ಸಹ ಚುನಾಯಿತ ಸರ್ಕಾರ, ರಾಜ್ಯದಲ್ಲಿ ನಮ್ಮದೂ ಚುನಾಯಿತ ಸರ್ಕಾರ, ಯಾರ ಕರುಣೆಯಿಂದಲೂ ನಾವು ಅಧಿಕಾರಕ್ಕೆ ಬಂದಿಲ್ಲ. ಒಕ್ಕೂಟ ವ್ಯವಸ್ಥೆಗೆ ಪ್ರಧಾನ ವಿಷಯವಾಗಿದೆ. ನಮಗೆ ಬೆದರಿಕೆ ಹಾಕಿ ಏನೂ ಪ್ರಯೋಜನವಿಲ್ಲ. ಪಶ್ಚಿಮ ಬಂಗಾಳಕ್ಕೆ ತೊಂದರೆ ನೀಡಬೇಡಿ ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited