Untitled Document
Sign Up | Login    
Dynamic website and Portals
  
January 31, 2015

ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಸಚಿವರು ಕಡತ ತಿದ್ದುತ್ತಿದ್ದಾರೆ- ಡಿವಿಎಸ್

ಡಿ.ವಿ.ಸದಾನಂದ ಗೌಡ ಡಿ.ವಿ.ಸದಾನಂದ ಗೌಡ

ತುಮಕೂರು : ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಕಡತ ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಈಗಾಗಲೇ ಹಲವು ರೀತಿಯಲ್ಲಿ ಕಾನೂನಿನ ವ್ಯಾಪ್ತಿಯಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಕೊನೆಯ ಹಂತವಾಗಿ ರಾಜ್ಯಪಾಲರಿಂದ ಅನುಮತಿ ಪಡೆಯುತ್ತೇವೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗ್ರಹಿಸಿದ ಮಾಹಿತಿಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದ ಅವರು, ದಾಖಲೆಗಳನ್ನು ಕೋರ್ಟ್ ಗೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕರು ನಮ್ಮ ಬುಟ್ಟಿಯಲಿಯೂ ಹಾವಿದೆ. ಅದನ್ನು ಬಿಡುತ್ತೇವೆ ಎಂದಿದ್ದಾರೆ. ಅದ್ಯಾವ ಹಾವು ಬಿಡುತ್ತಾರೋ ಅಂತ ಕಾದುನೋಡಬೇಕಿದೆ ಎಂದು ಲೇವಡಿ ಮಾಡಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited