ನವದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತವಾಗಿರುವುದರಿಂದ ಪೆಟ್ರೋಲ್, ಡೀಸೆಲ್ ದರಗಳು ಮತ್ತೊಮ್ಮೆ ಇಳಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.42ರೂಪಾಯಿ, ಡಿಸೇಲ್ ದರ 2.25ರೂ ಇಳಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾತೈಲದ ಬೆಲೆ 40 ಡಾಲರ್ ಗೆ ಕುಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಕಂಡುಬಂದಿದೆ. ಸದ್ಯದಲ್ಲೇ ಬ್ಯಾರೆಲ್ ಕಚ್ಚಾ ತೈಲದ ಬೆಲೆ ಮತ್ತಷ್ಟು ಕಡಿಮೆಯಾಗಲಿದೆ ಎನ್ನಲಾಗುತ್ತಿದೆ. ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಪದೇ ಪದೇ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಿರುವುದು ವಾಹನ ಸವಾರರಲ್ಲಿ ಅತೀವ ಸಂತಸ ಉಂಟುಮಾಡಿದೆ.
ಕಳೆದ 8 ತಿಂಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆಯಾಗುತ್ತಿದೆ. ಜ.16ರಂದು ಪೆಟ್ರೋಲ್, ಡಿಸೇಲ್ ಬೆಲೆಯನ್ನು ಇಳಿಕೆ ಮಾಡಲಾಗಿತ್ತು. ಜನವರಿಯಲ್ಲಿ ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚು ಮಾಡಿದ್ದರೂ ದರ ಇಳಿಕೆಯಾಗುತ್ತಿದೆ. ನರೇಂದ್ರ ಮೋದಿ ಸರ್ಕಾರ ಅಸ್ಥಿತ್ವಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ಪ್ರಾರಂಭವಾಗಿದ್ದ ಪೆಟ್ರೋಲ್ ಬೆಲೆ ಇಳಿಕೆ ಫೆ.ತಿಂಗಳಲ್ಲೂ ಮುಂದುವರೆದಿದೆ.