Untitled Document
Sign Up | Login    
Dynamic website and Portals
  
February 4, 2015

ಎಪಿಎಲ್ ಕಾರ್ಡ್ ದಾರರಿಗೂ ಪಡಿತರ ವಿತರಣೆ: ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಎಪಿಎಲ್ ಕಾರ್ಡ್ ದಾರರಿಗೂ ಪಡಿತರ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಪಿಎಲ್ ಕಾರ್ಡ್ ದಾರರಿಗೂ ಅಕ್ಕಿ ವಿತರಣೆ ಮಾಡಲಾಗುವುದು ಎಂದರು.

ಇದನ್ನು ಸ್ವಾಗತಿಸಿದ ಶಾಸಕರು ಕೆ.ಜಿಗೆ 10 ರೂ ನಿಗದಿ ಮಾಡುವಂತೆ ಮನವಿ ಮಾಡಿದರು. ತಮಿಳುನಾಡು ಮಾದರಿಯಲ್ಲಿ ಕಡಿಮೆ ದರದಲ್ಲಿ ಕ್ಯಾಂಟಿನ್ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ನ್ಯಾಯಬೆಲೆ ಅಂಗಡಿಯಲ್ಲಿ ನಕಲಿ ಕಾರ್ಡ್ ಸಿಕ್ಕರೆ ಅಂಗಡಿ ಮಾಲೀಕನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಲೈಸೆನ್ಸ್ ರದ್ದು ಮಾಡುವಂತೆ ಶಾಸಕ ರಮೇಶ್ ಕುಮಾರ್ ಸಲಹೆ ನೀಡಿದರು.

ರಾಜ್ಯದಲ್ಲಿ ಲಾಟರಿ ಜಾರಿಗೆ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಯೋಜನಾ ಮಂಡಳಿ ಶಿಫಾರಸಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸಚಿವರ ವಿರುದ್ಧ ಶಾಸಕರು ಅಸಮಾಧಾನಗೊಂಡಿದ್ದು, ಸರ್ಕಾರದ ರಕ್ಷಣೆಗೆ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited