ಲಖ್ನೌ : 'ಆಮ್ ಆದ್ಮಿ ಪಕ್ಷ'ದ ವಿರುದ್ಧ ದಿನಕ್ಕೊಂದು ಹೊಸ ಆರೋಪ ಕೇಳಿಬರುತ್ತಿದ್ದರೆ, ಇತ್ತ ಸಮಾಜವಾದಿ ಪಕ್ಷ ಆಪ್ ಬೆಂಬಲಕ್ಕೆ ಧಾವಿಸಿದೆ.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್, ಆಮ್ ಆದ್ಮಿ ಪಕ್ಷ ಜನಪ್ರಿಯತೆಯ ಬಗ್ಗೆ ಬಿಜೆಪಿಗೆ ಆತಂಕವಾಗಿದೆ, ಆದ್ದರಿಂದಲೇ ಅರವಿಂದ್ ಕೇಜ್ರಿವಾಲ್ ವಿರುದ್ಧ ಹವಾಲ ದೇಣಿಗೆ ಆರೋಪ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದ್ದು, ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಮ್ ಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷದ ವಿರುದ್ಧ ಮಿಡ್ ನೈಟ್ ಹವಾಲ ನಡೆಸಿರುವ ಆರೋಪ ಮಾಡಿರುವ ಎವಿಎಎಂ ಆಪ್ ನಿಂದ ಹೊರನಡೆದಿರುವ ಸಂಘಟನೆ ಅದರ ಆರೋಪಗಳಲ್ಲಿ ಹುರುಳಿಲ್ಲ ಎಂದು ಎಸ್.ಪಿ ಮುಖಂಡ ರಾಮ್ ಗೋಪಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಚುನಾವಣೆಗೆ ಸಮಾಜವಾದಿ ಪಕ್ಷ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿರುವುದು ಅಚ್ಚರಿಗೆ ಕಾರಣವಾಗಿದೆ