Untitled Document
Sign Up | Login    
Dynamic website and Portals
  
February 5, 2015

ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ವಜಾ

ಬೆಂಗಳೂರು : ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಲ ಒಕ್ಕೂಟ) ವ್ಯವಸ್ಥಾಪಕ ನಿರ್ದೇಶಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಕೆ.ಎಂ.ಎಫ್ ನಡುವೆ ಹಗ್ಗಜಗ್ಗಾಟ ಮುಂದುವರೆದಿದೆ. ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಉಲ್ಲಂಘಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, 2 ವರ್ಷ ಕೆ.ಎಂ.ಎಫ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

ಕೆ.ಎಂ.ಎಫ್ ನ ನೂತನ ಎಂ.ಡಿಯಾಗಿ ಎಸ್.ಎಂ.ಜಯರಾಮ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಜಯರಾಂ ನೇಮಕಕ್ಕೆ ಕೆ.ಎಂ.ಎಫ್ ಆಕ್ಷೇಪವ್ಯಕ್ತಪಡಿಸಿತ್ತು . ಅಲ್ಲದೇ ಆಡಳಿತ ಮಂಡಳಿಯಿಂದ ರಾಮಲಿಂಗೇಗೌಡರನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲು ನಿರ್ಧರಿಸಿತ್ತು. ಕೆ.ಎಂ.ಎಫ್ ನ ಈ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸರ್ಕಾರ ತನ್ನ ಆದೇಶ ಉಲ್ಲಂಘಿಸಿದ್ದಕ್ಕಾಗಿ ನಾಗರಾಜ್ ರನ್ನು ವಜಾ ಮಾಡಿ ಆದೇಶ ಹೊರಡಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited