Untitled Document
Sign Up | Login    
Dynamic website and Portals
  
February 5, 2015

ಟ್ವಿಟರ್ ನಲ್ಲಿ ಆಪ್ ಪರ ಮತ ಯಾಚಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ನವದೆಹಲಿ : 'ಆಮ್ ಆದ್ಮಿ ಪಕ್ಷ'ಕ್ಕೆ ಮತ ಹಾಕುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೆಹಲಿ ಜನತೆಗೆ ಮನವಿ ಮಾಡಿದ್ದಾರೆ.

ಟ್ವೀಟರ್ ಮೂಲಕ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸಿರುವ ಮಮತಾ ಬ್ಯಾನರ್ಜಿ, ದೆಹಲಿಯ ಅಭಿವೃದ್ಧಿಗಾಗಿ ದಯವಿಟ್ಟು ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಎಂದು ಮತಯಾಚಿಸಿದ್ದಾರೆ. ಬಿಜೆಪಿ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಮಮತಾ ಬ್ಯಾನರ್ಜಿ, ಈಗ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ನೀಡಿರುವುದು ಅಚ್ಚರಿ ಮೂಡಿಸಿದೆ.

ಇತ್ತೀಚೆಗಷ್ಟೇ ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್ ಆಮ್ ಆದ್ಮಿ ಪಕ್ಷದ ಪರ ಮಾತನಾಡಿದ್ದರು. ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದ್ದು, ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಮ್ ಗೋಪಾಲ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದರು. ಅಲ್ಲದೇ ಆಪ್ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿಂದೆ ಬಿಜೆಪಿ ಷಡ್ಯಂತ್ರವಿದೆ ಎಂದು ಆರೋಪಿಸಿದ್ದರು.

ಆಮ್ ಆದ್ಮಿ ಪಕ್ಷದ ಜನಪ್ರಿಯತೆ ಸಹಿಸಲು ಸಾಧ್ಯವಾಗದ ಬಿಜೆಪಿ ಆಪ್ ವಿರುದ್ಧ ಹವಾಲ ದೇಣಿಗೆ ಆರೋಪ ಮಾಡುತ್ತಿದೆ. ಆದರೆ ದೆಹಲಿಯಲ್ಲಿ ಆಪ್ ಗೆಲುವು ನಿಶ್ಚಿತ ಎಂದು ಹೇಳಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಟ್ವಿಟರ್ ನಲ್ಲಿ ಆಮ್ ಆದ್ಮಿ ಪಕ್ಷದ ಪರ ಮತಯಾಚನೆ ಮಾಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited