Untitled Document
Sign Up | Login    
Dynamic website and Portals
  
February 7, 2015

ದೆಹಲಿ ವಿಧಾನಸಭಾ ಚುನಾವಣೆ: ಮತದಾನ ಆರಂಭ

ನವದೆಹಲಿ : ದೆಹಲಿಯಲ್ಲಿ ವಿಧಾನಸಭಾ ಚುನಾವಣೆಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಒಟ್ಟು 1,33,14,215 ಮತದಾರರು ಸುಮಾರು 673 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

ಕೊರೆಯುವ ಚಳಿಯ ವಾತಾವರಣವಿದ್ದರೂ ರಾಷ್ಟ್ರ ರಾಜಧಾನಿಯ ಹಲವೆಡೆಗಳಲ್ಲಿ ಮತದಾರರು ಉತ್ಸಾಹದಿಂದಲೇ ಮತದಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ದೆಹಲಿಯ 70 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಸಂಜೆ 6 ಗಂಟೆಯವರೆಗೆ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶವಿದೆ. ಒಟ್ಟು 12,083 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಫೆ.10ರಂದು ಫಲಿತಾಂಶ ಪ್ರಕಟವಾಗಲಿದೆ.

ಆಮ್‌ ಆದ್ಮಿ ಪಕ್ಷದ ಅರವಿಂದ್‌ ಕೇಜ್ರಿವಾಲ್‌ ಹಾಗೂ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್‌ ಬೇಡಿ ಅವರ ನಡುವಿನ ನೇರ ಹಣಾಹಣಿಯಾಗಿ ಈ ಬಾರಿಯ ದೆಹಲಿ ಚುನಾವಣೆ ಮಹತ್ವ ಪಡೆದಿದೆ.

ಕಳೆದ ಬಾರಿ ಅಧಿಕಾರದ ಸನಿಹಕ್ಕೆ ಬಂದು ನಿರಾಶೆಗೊಳಗಾಗಿದ್ದ ಬಿಜೆಪಿ ಈ ಬಾರಿ ಸ್ಪಷ್ಟ ಬಹುಮತ ಪಡೆಯುವುದೇ ಅಥವಾ ಕಳೆದ ಬಾರಿ ಕಾಂಗ್ರೆಸ್‌ ಬಾಹ್ಯ ಬೆಂಬಲದೊಂದಿಗೆ 48ದಿನಗಳ ಸರಕಾರ ನಡೆಸಿದ್ದ ಅರವಿಂದ್‌ ಕೇಜ್ರಿವಾಲ್‌ ಅವರೇ ಮತ್ತೆ ಗೆಲುವು ಸಾಧಿಸಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited