Untitled Document
Sign Up | Login    
Dynamic website and Portals
  
February 8, 2015

ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿ ಆಂತರಿಕ ಸಮಿಕ್ಷೆ ಪ್ರಕಟ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಫಲಿತಾಂಶ ಪ್ರಕಟವಾಗುವ ಮುನ್ನವೇ ಭಾರತೀಯ ಜನತಾ ಪಕ್ಷ ಸೋಲೊಪ್ಪಿಕೊಂಡಿರುವುದು ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆಯಿಂದ ಬಹಿರಂಗವಾಗಿದೆ.

ಪ್ರತಿಷ್ಠೆ ಕಣವಾಗಿದ್ದ ದೆಹಲಿ ಚುನಾವಣೆಯಲ್ಲಿ ಬಿಜೆಪಿ 34 ಸ್ಥಾನಗಳು ಲಭಿಸುವ ಸಾಧ್ಯತೆ ಇರುವುದಾಗಿ ಸಮೀಕ್ಷೆ ಹೇಳಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.

ಸುಮಾರು 20 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲು ಖಚಿತವಾಗಿದ್ದು, 16 ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಎದುರಿಸಲಿದೆ ಎಂದು ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. 16 ಕ್ಷೇತ್ರಗಳ ಫಲಿತಾಂಶ ಯಾವ ಪಕ್ಷದ ಪರವಾಗಲಿದೆ ಎಂಬುದನ್ನು ಬಹಿರಂಗಗೊಳಿಸದ ಬಿಜೆಪಿ ಜಾಣತನ ಪ್ರದರ್ಶಿಸಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆ ಗದ್ದುಗೆ ಏರಲು 36 ಸ್ಥಾನಗಳ ಅಗತ್ಯವಿದೆ.

ಏತನ್ಮಧ್ಯೆ ಆಮ್ ಆದ್ಮಿ ಪಕ್ಷ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹಲವು ಮತದಾನೋತ್ತರ ಸಮೀಕ್ಷೆಗಳು ತಿಳಿಸಿವೆ. ಫೆಬ್ರುವರಿ 10ರಂದು ಫಲಿತಾಂಶ ಪ್ರಕಟವಾಗಲಿದೆ. ಅಲ್ಲಿಯವರೆಗೂ ಪಕ್ಷಗಳ ರಾಜಕೀಯದ ಲೆಕ್ಕಚಾರ ಮುಂದುವರಿಯಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited