ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕೊನೆ ಹಂತಕ್ಕೆ ಬಂದು ತಲುಪಿದ್ದು, ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಹೊರಬೀಳಲಿದೆ.
56 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸಿ ಗೆಲುವಿನತ್ತ ನಾಗಾಲೋಟ ಆರಂಭಿಸಿದೆ. ಬಿಜೆಪಿ 12 ಕ್ಷೇತ್ರಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ದ್ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಇತರೆ ಪಕ್ಷ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
2013ರ ವಿಧಾನಸಭಾ ಚುನಾವಣೆಯಲ್ಲಿ 28 ಸ್ಥಾನ ಗಳಿಸಿದ್ದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ. 2015ರ ಚುನಾವಣೆಯಲ್ಲೂ ದೆಹಲಿಯ ಮತದಾರ ಅರವಿಂದ್ ಕೇಜ್ರಿವಾಲ್ ಗೆ ಆಶೀರ್ವಾದ ನೀಡುವ ಮೂಲಕ ಗದ್ದುಗೆ ಏರಲು ಅವಕಾಶ ಮಾಡಿಕೊಟ್ಟಿದ್ದಾರೆ. 70 ವಿಧಾನಸಭಾ ಬಲ ಹೊಂದಿರುವ ವಿಧಾನಸಭೆಯಲ್ಲಿ ಎಎಪಿ 56 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಅಭೂತಪೂರ್ವ ಗೆಲುವಿನತ್ತ ಸಾಗುತ್ತಿದೆ.
ಇನ್ನು ಕೆಲವೇ ಗಂಟೆಯಲ್ಲಿ ಸ್ಪಷ್ಟ ಚಿತ್ರಣ ಲಭ್ಯವಾಗಲಿದ್ದು, ದೆಹಲಿಯಲ್ಲಿ 2ನೇ ಬಾರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ರಚನೆ ಖಚಿತವಾಗಿದೆ.