ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ. ಜನಸಾಮಾನ್ಯರ ನಿರೀಕ್ಷೆಗಳನ್ನು ಈಡೇರಿಸಬೇಕಿದೆ ಎಂದು ಹೇಳಿದ್ದಾರೆ.
ರೈತರ ಭೂಮಿಯನ್ನು ಮೋದಿ ಸರ್ಕಾರ ಒತ್ತಾಯಪೂರ್ವಕವಾಗಿ ವಶಕ್ಕೆ ಪಡೆಯಬಾರದು ಭೂಸ್ವಾಧೀನ ಮಸೂದೆಗೆ ಸುಗ್ರೀವಾಜ್ನೆಯ ಅಗತ್ಯವಿರಲಿಲ್ಲ ಎಂದು ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಗಂಗಾ ನದಿ ಶುದ್ಧೀಕರಣ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ನರೇಂದ್ರ ಮೋದಿ ಅವರು ಕೈಗೊಂಡ ನಿರ್ಧಾರಗಳಿಗೆ ಶ್ಲಾಘನೆ ವ್ಯಕ್ತಪಡಿಸುತ್ತಿದ್ದ ಪೇಜಾವರ ಶ್ರೀಗಳು ಇದೀಗ ಏಕಾಏಕಿ ನರೇಂದ್ರ ಮೋದಿ ಸರ್ಕಾರ ಜನಸಾಮಾನ್ಯರ ನಿರೀಕ್ಷೆಗಳನ್ನು ಈಡೇರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವುದು ಅಚ್ಚರಿ ಮೂಡಿಸಿದೆ.