Untitled Document
Sign Up | Login    
Dynamic website and Portals
  
February 12, 2015

ಅರವಿಂದ್ ಕೇಜ್ರಿವಾಲ್ ನಿಕಟವರ್ತಿ ಮನೀಶ್ ಸಿಸೋಡಿಯಾ ದೆಹಲಿ ಉಪಮುಖ್ಯಮಂತ್ರಿ

ಮನೀಶ್ ಸಿಸೋಡಿಯಾ ಮನೀಶ್ ಸಿಸೋಡಿಯಾ

ನವದೆಹಲಿ : 'ಆಮ್ ಆದ್ಮಿ ಪಕ್ಷ'ದ ಪ್ರಮುಖ ನಾಯಕರು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧಗೊಂಡಿದ್ದಾರೆ.

ಯಾವ ನಾಯಕರು ಆಮ್ ಆದ್ಮಿ ಸರ್ಕಾರದ ಭಾಗವಾಗಿರಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇತ್ತೀಚಿನ ವರದಿಗಳ ಪ್ರಕಾರ ದೆಹಲಿಗೆ ಉಪಮುಖ್ಯಮಂತ್ರಿಯೂ ದೊರೆಯಲಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಆಮ್ ಆದ್ಮಿ ಪಕ್ಷದ ಮೂಲಗಳ ಪ್ರಕಾರ ಅರವಿಂದ್ ಕೇಜ್ರಿವಾಲ್ ಅವರ ನಿಕಟವರ್ತಿ ಮನೀಶ್ ಸಿಸೋಡಿಯಾ ದೆಹಲಿಯ ಉಪಮುಖ್ಯಮಂತ್ರಿಯಾಗಲಿದ್ದಾರೆ. ಕೌಶಂಭಿಯ ಕೇಜ್ರಿವಾಲ್ ಅವರ ಸ್ವಗೃಹದಲ್ಲಿ ನಡೆದ ಆಪ್ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮನೀಶ್ ಸಿಸೋಡಿಯಾ, ದೆಹಲಿಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸುವ ನಿಟ್ಟಿನಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸಿದ್ದರು. ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಲು ಇದೂ ಒಂದು ಪ್ರಮುಖ ಕಾರಣವಾಗಿದೆ.

ಕಳೆದ ವರ್ಷದ ಎಎಪಿ ಅಧಿಕಾರದಲ್ಲಿ ಸಿಸೋಡಿಯಾ ಕಂದಾಯ ಮತ್ತು ನಗರಾಭಿವೃದ್ಧಿ ಖಾತೆಗಳನ್ನು ನಿರ್ವಹಿಸಿದ್ದರು. ಕೇಜ್ರಿವಾಲ್ ಮತ್ತು ಸಿಸೋಡಿಯಾ ಶನಿವಾರ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿಸೋಡಿಯಾ ಆಲ್ ಇಂಡಿಯ ರೇಡಿಯೋದಲ್ಲಿ ಕಾರ್ಯನಿರ್ವಹಿಸಿದ್ದು, ಮಾಹಿತಿ ಹಕ್ಕು ಕಾಯ್ದೆಯ ಜಾರಿಗೆ ನಡೆದ ಚಳವಳಿಯಲ್ಲಿ ಭಾಗವಹಿಸಲು ತಮ್ಮ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದರು. ಫತ್ಪರ್ಗಂಜ್ ಕ್ಷೇತ್ರದಿಂದ ಬಿಜೆಪಿ ಪಕ್ಷದ ವಿನೋದ್ ಕುಮಾರ್ ಬಿನ್ನಿ ಅವರನ್ನು ಸೋಲಿಸುವ ಮೂಲಕ ಸಿಸೋದಿಯಾ ಶಾಸಕರಾಗಿ ಆಯ್ಕೆಯಾಗಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited