Untitled Document
Sign Up | Login    
Dynamic website and Portals
  
February 12, 2015

ಪ್ರಧಾನಿ ಮೋದಿ ವಿರುದ್ಧ ನಿತೀಶ್ ಕುಮಾರ್ ವಾಗ್ದಾಳಿ

ಪಾಟ್ನಾ : ಬಿಹಾರ ರಾಜ್ಯಪಾಲರು ದೆಹಲಿಯಿಂದ ಬರುವ ನಿರ್ದೇಶನ ಪಾಲಿಸುತ್ತಿದ್ದಾರೆ ಎಂದು ಆರೋಪಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಹಾರ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಅವಕಾಶ ನೀಡುವ ಮೂಲಕ ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ ಎಂದು ನಿತೀಶ್ ಕುಮಾರ್ ದೂರಿದ್ದಾರೆ. ಅಲ್ಲದೆ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯಪಾಲರು ಮಾಂಝಿಗೆ ತಕ್ಷಣ ಬಹುಮತ ಸಾಬೀತುಪಡಿಸುವಂತೆ ಸೂಚಿಸಬೇಕು ಎಂದು ನಾವು ಒತ್ತಾಯಿಸಿದ್ದೇವು. ಆದರೆ ರಾಜ್ಯಾಪಾಲರು ಮೊದಲು ಈ ಕುರಿತು ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡಿದರು. ಬಳಿಕ ಫೆಬ್ರವರಿ 20ರಂದು ಬಹುಮತ ಸಾಬೀತಿಗೆ ಸೂಚಿಸುವ ಮೂಲಕ ಸಾಕಷ್ಟು ಸಮಯವಕಾಶ ನೀಡಲಾಗಿದೆ. ಇದರಿಂದ ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದಂತಾಗಿದೆ ಎಂದು ಗುಡುಗಿದ್ದಾರೆ.

ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿರುವ ನಿತೀಶ್ ಕುಮಾರ್, ಬಿಜೆಪಿ ಅಗತ್ಯ ಬಿದ್ದರೆ ತನ್ನ 35 ಶಾಸಕರ ಬೆಂಬಲ ನೀಡುವುದಾಗಿ ಸಹ ಮಾಂಝಿಗೆ ಮಾತು ಕೊಟ್ಟಿದೆ ಎಂದಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited