Untitled Document
Sign Up | Login    
Dynamic website and Portals
  
February 13, 2015

ಭಾರತೀಯನ ಮೇಲೆ ಹಲ್ಲೆ ನಡೆಸಿದ್ದ ಯು.ಎಸ್ ಪೊಲೀಸ್ ಬಂಧನ: ಬಹಿರಂಗವಾದ ಹಲ್ಲೆ ವಿಡಿಯೋ

ವಾಷಿಂಗ್ಟನ್‌ : 'ಅಮೆರಿಕಾ'ದಲ್ಲಿ ಗುಜರಾತ್‌ ಮೂಲದ ಸುರೇಶ್‌ ಭಾಯ್ ಪಟೇಲ್‌ ರನ್ನು ಹೊಡೆದು ಕೆಳಗೆ ತಳ್ಳಿರುವ ವಿಡಿಯೋ ದೃಷ್ಯ ದೊರೆತಿದ್ದು, ಹಲ್ಲೆ ನಡೆಸಿದ್ದ ಇಬ್ಬರು ಪೊಲೀಸ್‌ ಸಿಬಂದಿಗಳ ಪೈಕಿ ಒಬ್ಬರನ್ನು ಬಂಧಿಸಲಾಗಿದೆ.

ಈ ಪ್ರಕರಣದ ತನಿಖೆಯನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್ ಬಿ ಐ) ಕೈಗೆತ್ತಿಕೊಂಡಿದೆ. ಸುರೇಶ್ ಭಾಯ್ ಪಟೇಲ್ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್ ಅಧಿಕಾರಿ ತನ್ನ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದು, ಕ್ಷಮೆಯಾಚಿಸಿದ್ದಾನೆ.

ಈ ಪ್ರಕರಣದ ಬಗ್ಗೆ ಯು.ಎಸ್ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ, ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕುಟುಂಬ ಸದಸ್ಯರಲ್ಲಿ ಕ್ಷಮೆ ಕೋರುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿರುವ ಪೊಲೀಸ್‌ ಮುಖ್ಯಸ್ಥರು ಅಮೆರಿಕನ್‌ ಪೊಲೀಸರಲ್ಲಿ ಜನಾಂಗೀಯ ಪೂರ್ವಾಗ್ರಹಗಳಿರುವುದು ಕಳವಳಕಾರಿಯಾಗಿದೆ ಎಂದು ಹೇಳಿದ್ದಾರೆ ಮತ್ತು ಅದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.

ಗುಜರಾತ್‌ ಮೂಲದ ಸುರೇಶ್‌ ಭಾಯಿ ಪಟೇಲ್‌ ಎಂಬ ವ್ಯಕ್ತಿಯ ಮೇಲೆ ಅಲಬಾಮಾ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿ ಆಂಶಿಕ ಪಾರ್ಶ್ವವಾಯುವಿಗೆ ಗುರಿ ಮಾಡಿ ಮಾಡಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದರು. ಅಲಬಾಮಾ ಪೊಲೀಸ್‌ ಸಿಬಂದಿ ನಡೆಸಿದ್ದ ಈ ಅಮಾನುಷ ಹಲ್ಲೆ ಭಾರತೀಯ ಸಮುದಾಯದಲ್ಲಿ ಭಾರೀ ಅಕ್ರೋಶಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ಅಮೆರಿಕಾ ಸರ್ಕಾರವನ್ನು ಒತ್ತಾಯಿಸಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited