Untitled Document
Sign Up | Login    
Dynamic website and Portals
  
February 13, 2015

ನಿಧಿ ದುರುಪಯೋಗ ಆರೋಪಕ್ಕೆ ರಾಜಕೀಯ ಬಣ್ಣ ನೀಡಬೇಡಿ: ಸೆಟಲ್ವಾಡ್ ಗೆ ಸುಪ್ರೀಂ ಎಚ್ಚರಿಕೆ

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನಕ್ಕೆ ಫೆ.19ವರೆಗೂ ತಡೆ ನೀಡಿದ ಸುಪ್ರೀಂ ಕೋರ್ಟ್

ನಿಧಿ ದುರುಪಯೋಗ ಆರೋಪ ಎದುರಿಸುತ್ತಿರುವ ತೀಸ್ತಾ ಸೆಟಲ್ವಾಡ್ ನಿಧಿ ದುರುಪಯೋಗ ಆರೋಪ ಎದುರಿಸುತ್ತಿರುವ ತೀಸ್ತಾ ಸೆಟಲ್ವಾಡ್

ನವದೆಹಲಿ : ತಮ್ಮ ವಿರುದ್ಧ ಕೇಳಿಬಂದಿರುವ ನಿಧಿ ದುರ್ಬಳಕೆ ಆರೋಪಕ್ಕೆ ರಾಜಕೀಯ ಬಣ್ಣ ನೀಡಲು ಯತ್ನಿಸಿರುವ ತೀಸ್ತಾ ಸೆಟಲ್ವಾಡ್ ಅವರನ್ನು ಸುಪ್ರೀಂ ಕೋರ್ಟ್ ತಾರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ರಾಜಕೀಯ ತಿರುವು ನೀಡದಂತೆ ಎಚ್ಚರಿಸಿದೆ.

ಇದೇ ವೇಳೆ ತೀಸ್ತಾ ಸೆಟಲ್ವಾಡ್ ಬಂಧನಕ್ಕೆ ಫೆ.19ರ ವರೆಗೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ನಿಧಿ ದುರುಪಯೋಗ ಮಾಡಿರುವ ಆರೋಪ ಎದುರಿಸುತ್ತಿರುವ ತೀಸ್ತಾ ಸೆಟಲ್ವಾಡ್ ಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.

ಗುಲ್ಬರ್ಗ್ ಸೊಸೈಟಿ ನಿಧಿ ದುರುಪಯೋಗ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ನಂತರ ಸೆಟಲ್ವಾಡ್, ಆಕೆಯ ಪತಿ ಜಾವೇದ್ ಆನಂದ್ ಸೇರಿದಂತೆ ಪ್ರಕರಣದ ಇತರ ಆರೋಪಿಗಳಿಗೆ ಬಂಧನದ ಭೀತಿ ಮತ್ತಷ್ಟು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಪ್ರಕರಣದ ಆರೋಪಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಆರೋಪಿಗಳು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುವವರೆಗೂ ಬಂಧನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇದೇ ವೇಳೆ ತಮ್ಮ ವಿರುದ್ಧದ ಆರೋಪವನ್ನು ರಾಜಕೀಯಗೊಳಿಸದಂತೆ ತೀಸ್ತಾ ಸೆಟಲ್ವಾಡ್ ಗೆ ಎಚ್ಚರಿಕೆ ನೀಡಿದೆ. ಫೆ.12ರಂದು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ತೀಸ್ತಾ ಸೆಟಲ್ವಾಡ್ ಪೊಲೀಸರ ಕೈಗೆ ಸಿಗದಂತೆ ತಲೆಮರೆಸಿಕೊಂಡಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited