Untitled Document
Sign Up | Login    
Dynamic website and Portals
  
February 14, 2015

ಭಾರತ ವಿಶ್ವದಲ್ಲಿ ವೇಗವಾಗಿ ಆರ್ಥಿಕ ಬೆಳವಣಿಗೆ ಕಾಣುತ್ತಿದೆ: ಪ್ರಧಾನಿ ಮೋದಿ

ನರೇಂದ್ರ ಮೋದಿ ನರೇಂದ್ರ ಮೋದಿ

ಪುಣೆ : ಭಾರತದ ಆರ್ಥಿಕತೆ ವಿಶ್ವದಲ್ಲೇ ಅತಿವೇಗವಾಗಿ ಬೆಳೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಮ್ಮ ದೇಶದ ಜಿಡಿಪಿ ಬೆಳವಣಿಗೆ ದರ ಶೇ.7.4ರಷ್ಟಾಗಿದ್ದು, ವಿಶ್ವದಲ್ಲಿ ವೇಗವಾದ ಆರ್ಥಿಕ ಬೆಳವಣಿಗೆ ಕಾಣುತ್ತಿರುವ ರಾಷ್ಟ್ರ ಭಾರತವಾಗಿದೆ ಎಂದಿದ್ದಾರೆ.

ಪುಣೆಯಲ್ಲಿ ನಿರ್ಮಿಸಲಾಗಿರುವ ಜನರಲ್ ಎಲೆಕ್ಟ್ರಿಕ್ ನ ಮೊದಲ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಮೇಕ್ ಇನ್ ಇಂಡಿಯಾ ಅಭಿಯಾನದ ಮೂಲಕ ಭಾರತದಲ್ಲಿ ಹಡಗು ಉತ್ಪಾದನೆಯನ್ನು ಪ್ರಾರಂಭಿಸುವಂತೆ ಯು.ಎಸ್ ಮೂಲದ ಜನರಲ್ ಎಲೆಕ್ಟ್ರಿಕ್(ಜಿ.ಇ) ಕಂಪನಿಯನ್ನು ಭಾರತಕ್ಕೆ ಆಹ್ವಾನಿಸಿದ್ದಾರೆ. ಹಡಗು ಉತ್ಪಾದನಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಭರಪೂರ ಅವಕಾಶಗಳಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಭಾರತದಲ್ಲಿ ಘಟಕವನ್ನು ಪ್ರಾರಂಭಿಸಿದ್ದಕ್ಕಾಗಿ ಜಿ.ಇ ಕಂಪನಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅಂತೆಯೇ ಇತರ ಕಂಪನಿಗಳಿಗೂ ಭಾರತದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸುವ ಅವಕಾಶ ಇದೆ ಎಂದು ಹೇಳಿದ್ದಾರೆ.

ಭಾರತದಕ್ಕೆ ಡೆಮಾಗ್ರಾಫಿಕ್ ಡಿವಿಡೆಂಡ್ ವರದಾನವಾಗಿದ್ದು, ಭಾರತ ವಿಶ್ವದಲ್ಲೇ ಬಲಿಷ್ಠ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited