Untitled Document
Sign Up | Login    
Dynamic website and Portals
  
February 17, 2015

ಅಮೆರಿಕಾದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ

ವಾಷಿಂಗ್ ಟನ್ : ಭಾರತದಲ್ಲಿ ಮಹಾಶಿವರಾತ್ರಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಅಮೆರಿಕಾದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದೆ. ವಾಷಿಂಗ್ ಟನ್ ಸ್ಟೇಟ್ ನಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ ನಡೆದಿದ್ದು ದೇವಾಲಯದ ಗೇಟ್ ಮೇಲೆ ಗೆಟ್ ಔಟ್ ಎಂದು ಬರೆಯಲಾಗಿದೆ.

ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿರುವುದರಿಂದ ಅನಿವಾಸಿ ಭಾರತೀಯರು ಆತಂಕಕ್ಕೊಳಗಾಗಿದ್ದಾರೆ. ಮಹಾಶಿವರಾತ್ರಿ ಆಚರಣೆಯ ಹಿಂದಿನ ದಿನ ಈ ದಾಳಿ ನಡೆಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಅಮೆರಿಕಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆದರೆ ಈ ವರೆಗೂ ದೇವಾಲಯಗಳ ಮೇಲೆ ದಾಳಿ ನಡೆಸಿದ್ದ ದುಷ್ಕರ್ಮಿಗಳನ್ನು ಬಂಧಿಸಲಾಗಿಲ್ಲ.

ಇತ್ತೀಗಷ್ಟೇ ಭಾರತ ಪ್ರವಾಸ ಕೈಗೊಂಡಿದ್ದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಭಾರತದಲ್ಲಿರುವ ಧಾರ್ಮಿಕ ಅಸಹಿಷ್ಣುತೆ ಬಗ್ಗೆ ಮಾತನಾಡಿದ್ದರು. ಅಲ್ಲದೇ ಭಾರತದಲ್ಲಿರುವ ಧಾರ್ಮಿಕ ಅಸಹಿಷ್ಣುತೆಯನ್ನು ಮಹಾತ್ಮಾ ಗಾಂಧಿ ನೋಡಿದ್ದರೆ ಅಘಾತಕ್ಕೊಳಗಾಗುತ್ತಿದ್ದರು ಎಂದು ಆತಂಕ ವ್ಯಕ್ತಪಡಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಮೆರಿಕಾದಲ್ಲಿ ಭಾರತೀಯರ ಶ್ರದ್ಧಾ ಕೇಂದ್ರವಾಗಿರುವ ದೇವಾಲಯಗಳ ಮೇಲೆ ದಾಳಿ ನಡೆದಿದೆ.

ದೆವಾಲಯಗಳ ಮೇಲೆ ದಾಳಿ ನಡೆದಿರುವುದನ್ನು ಅಮೆರಿಕಾ ಅನಿವಾಸಿ ಭಾರತೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited