Untitled Document
Sign Up | Login    
Dynamic website and Portals
  
February 17, 2015

ದಲಿತರನ್ನು ಸಿಎಂ ಮಾಡಲು ಹೈಕಮಾಂಡ್ ಮೇಲೆ ಒತ್ತಡಕ್ಕೆ ನಿರ್ಧಾರ

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದರು.

ಸಭೆಯಲ್ಲಿ ಖದ್ದು ಪರಮೇಶ್ವರ ಅವರೂ ಭಾಗವಹಿಸಿದ್ದರು. ದಲಿತರು ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಸಭೆಯಲ್ಲಿ ಬಲವಾಗಿ ಕೇಳಿಬಂತು. ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಇಲ್ಲವೇ ಬೇರೊಬ್ಬ ದಲಿತ ನಾಯಕನಿಗೆ ಸಿಎಂ ಸ್ಥಾನ ನೀಡಬೇಕು. ಅಲ್ಲದೆ ಈ ಸಂಬಂಧ ಹೈಕಮಾಂಡ್ ಮೇಲೆ ಒತ್ತಡ ಹಾಕುವ ನಿರ್ಧಾರ ತೆಗೆದುಕೊಳ್ಳಲಾಯಿತು.

ಮಾರ್ಚ್ ಅಂತ್ಯದ ಒಳಗೆ ಹೈಕಮಾಂಡ್ ಈ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರಬೇಕು. ಇಲ್ಲದಿದ್ದರೆ ಹೋರಾಟದ ಹಾದಿ ತುಳಿಯುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited