Untitled Document
Sign Up | Login    
Dynamic website and Portals
  
February 17, 2015

ಮತಾಂತರ ನಿಷೇಧ ಕಾಯ್ದೆ ಸಮಾಜದ ಶಾಂತಿಗೆ ಭಂಗ: ದೆಹಲಿಯ ಆರ್ಚ್ ಬಿಷಪ್ ಜಾರ್ಜ್ ಕಾರ್ಡಿನಲ್

ನವದೆಹಲಿ : ದೇಶಾದ್ಯಂತ ಚರ್ಚೆಗೆ ಗುರಿಯಾಗಿರುವ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸಿರೊ ಮಲಬಾರ್ ಕ್ಯಾಥೊಲಿಕ್ ಚರ್ಚ್ ನ ಮುಖ್ಯಸ್ಥ ಜಾರ್ಜ್ ಕಾರ್ಡಿನಲ್ ಪ್ರತಿಕ್ರಿಯೆ ನೀಡಿದ್ದು, ಮತಾಂತರ ನಿಷೇಧ ಕಾಯ್ದೆ ವಿವಿಧ ಧರ್ಮಗಳ ನಡುವೆ ದ್ವೇಷ ಹರಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಧರ್ಮಗಳ ನಡುವೆ ದ್ವೇಷ ಹರಡುವ ಕಾಯ್ದೆಯಿಂದ ಸಮಾಜದ ಶಾಂತಿ ಹಾಳಾಗುತ್ತದೆ. ಆದ್ದರಿಂದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬಾರದು ಎಂದು ಬಿಷಪ್ ಜಾರ್ಜ್ ಕಾರ್ಡಿನಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ನಡೆದ ಇಬ್ಬರು ಕ್ರಿಶ್ಚಿಯನ್ ಪಾದ್ರಿಗಳ ಸಂತ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಾರ್ಜ್ ಕಾರ್ಡಿನಲ್, ಯಾರೇ ಬಲವಂತವಾಗಿ ಮತಾಂತರ ಮಾಡಿದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

ಇದೇ ವೇಳೆ ಪ್ರಧಾನಿಯ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ಘೋಷಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕಾರ್ಡಿನಲ್, ಕ್ರಿಶ್ಚಿಯನ್ ಸಮುದಾಯ ಸಹ ದೇಶದ ಅಭಿವೃದ್ಧಿಗೆ ಕೈಜೋಡಿಸಲಿದೆ ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ:  ಸ್ವಚ್ಚತಾ ಅಭಿಯಾನ
  • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
  • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
  • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
  • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited