Untitled Document
Sign Up | Login    
Dynamic website and Portals
  
February 18, 2015

ಏರೋ ಇಂಡಿಯಾ-2015 ಏರ್ ಶೋ ಗೆ ಪ್ರಧಾನಿ ಮೋದಿ ಚಾಲನೆ

ಏರೋ ಇಂಡಿಯಾ-2015 ಏರ್ ಶೋ ಗೆ ಪ್ರಧಾನಿ ಮೋದಿ ಚಾಲನೆ ಏರೋ ಇಂಡಿಯಾ-2015 ಏರ್ ಶೋ ಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು : ಮೇಕ್‌ ಇನ್‌ ಇಂಡಿಯಾ' ಮಂತ್ರದೊಂದಿಗೆ ಹತ್ತನೇ ಆವೃತ್ತಿಯ ’ಏರೋ ಇಂಡಿಯಾ ಶೋ' ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ-2015 ಏರ್ ಶೋ ಕಾರ್ಯಕ್ರಮವನ್ನುಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ,ಏರ್ ಶೋನಲ್ಲಿ ಭಾಗವಹಿಸುತ್ತಿರುವ ಎಲ್ಲ ಸಂಸ್ಥೆಗಳಿಗೂ ಸ್ವಾಗತಕೋರುತ್ತೇನೆ. ಬೆಂಗಳೂರು ಏರ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ನನಗೆ ಸಂತಸತಂದಿದೆ ಎಂದರು.

ಭಾರತದಲ್ಲಿ ಆಂತರಿಕ ಭದ್ರತೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಉಗ್ರರ ಉಪಟಳವನ್ನು ಸಮರ್ಥವಾಗಿ ಎದುರಿಸಬೇಕಿದೆ. ರಕ್ಷಣೆಯ ಸವಾಲುಗಳನ್ನು ಎದುರಿಸಲು ನಾವು ಇನ್ನಷ್ಟು ತಯಾರಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.

ಭಾರತದಲ್ಲಿ ಉಧ್ಯಮ ಸ್ಥಾಪನೆಗೆ ಸಾಕಷ್ಟು ಅವಕಾಶಗಳಿವೆ. ವಿಶ್ವದ ಅನೇಕ ರಾಷ್ಟ್ರಗಳು ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿವೆ. ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಹೇರಳ ಅವಕಾಶಗಳಿದ್ದು, ಇಲ್ಲಿ ಬಂಡವಾಳ ಹೂಡಿಕೆ ಹೆಚ್ಚಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಶೇ.60ರಷ್ಟು ರಕ್ಷಣಾ ಸಾಮಗ್ರಿಗಳು ಭಾರತಕ್ಕೆ ಆಮದಾಗುತ್ತಿದ್ದು, ಭಾರತದಲ್ಲೇ ರಕ್ಷಣಾ ಸಾಮಗ್ರಿಗಳನ್ನು ಉತ್ಪಾದಿಸುವ ಮೂಲಕ ಈ ಪ್ರಮಾಣವನ್ನು ಕಡಿಮೆಗೊಳಿಸುವತ್ತ ನಮ್ಮ ಚಿತ್ತ ಹರಿಸಬೇಕಿದೆ. ಆಮದು ಕಡಿಮೆಯಾದರೆ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ. ಭಾರತೀಯ ಸೇನೆಯಲ್ಲಿ ಆಧುನೀಕರಣದ ಅಗತ್ಯತೆ ಇದ್ದು, ನಾವು ರಕ್ಷಣಾ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಹೇಳಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited