Untitled Document
Sign Up | Login    
Dynamic website and Portals
  
February 20, 2015

ಏರೋ ಇಂಡಿಯಾ ಪ್ರದರ್ಶನ: ರನ್ ವೇ ಪಕ್ಕದಲ್ಲಿ ಬೆಂಕಿ

ಬೆಂಗಳೂರು : ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2015ಪ್ರದರ್ಶನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ವಾಯುನೆಲೆರನ್ ವೇ ಪಕ್ಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು.

ಫೆ.20ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ರನ್ ವೇ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡು ಅನಾಹುತ ನಡೆಯುವ ಸಾಧ್ಯತೆ ಇತ್ತು. ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಸಮಯ ಪ್ರಜ್ನೆಯಿಂದ ಯಾವುದೇ ದುರ್ಘಟನೆ ನಡೆದಿಲ್ಲ. ರನ್ ವೇ ಪಕ್ಕದಲ್ಲಿ ಒಣಹುಲ್ಲಿಗೆ ಬೆಂಕಿ ತಗುಲಿದ ಪರಿಣಾಮ ಸುತ್ತಮುತ್ತಲ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ಎನ್.ಡಿ.ಆರ್.ಎಫ್ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ. ಸಾರ್ವಜನಿಕರು ಸಿಗರೇಟ್ ನ್ನು ರನ್ ವೇ ಒಣ ಹುಲ್ಲಿನ ಮೇಲೆ ಎಸೆದಿರುವುದೇ ಬೆಂಕಿ ಕಾಣಿಸಿಕೊಳ್ಳಲು ಕಾರಣ ಎಂದು ಶಂಕಿಸಲಾಗಿದೆ. ಏರೋ ಇಂಡಿಯಾ ಪ್ರದರ್ಶನದಲ್ಲಿ ಧೂಮಪಾನ ನಿಷೇಧಿಸಿದ್ದರೂ ಸಹ ಶೋ ವೀಕ್ಷಿಸಲು ಆಗಮಿಸಿದ್ದ ಸಾರ್ವಜನಿಕರು ಬೇಜವಾಬ್ದಾರಿತನದಿಂದ ವರ್ತಿಸಿರುವ ಶಂಕೆ ವ್ಯಕ್ತವಾಗಿದೆ.

ಫೆ.19ರಂದೂ ಸಹ ನಡೆಯಬೇಕಿದ್ದ ಅವಘಡ ಸ್ವಲ್ಪದರಲ್ಲೇ ತಪ್ಪಿತ್ತು. ಪ್ರದರ್ಶನ ನಡೆಯುತ್ತಿದ್ದಾಗಲೇ ರೆಡ್ ಬುಲ್ ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ:  ಸ್ವಚ್ಚತಾ ಅಭಿಯಾನ
  • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
  • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
  • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
  • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited