Untitled Document
Sign Up | Login    
Dynamic website and Portals
  
February 21, 2015

ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ: ಚೀನಾದಿಂದ ತೀವ್ರ ಆಕ್ಷೇಪ

ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ: ಚೀನಾದಿಂದ ತೀವ್ರ ಆಕ್ಷೇಪ

ಬೀಜಿಂಗ್ : 'ಚೀನಾ' ಪ್ರವಾಸ ಕೈಗೊಳ್ಳುವ ಕೆಲವೇ ದಿನಗಳ ಮುನ್ನ ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದು ಚೀನಾ ಆಕ್ರೋಶಕ್ಕೆ ಕಾರಣವಾಗಿದೆ.

ಅರುಣಾಚಲ ಪ್ರದೇಶವನ್ನು ಚೀನಾ ದಕ್ಷಿಣ ಟಿಬೆಟ್ ಎಂದೇ ಹೇಳುತ್ತಿದ್ದು, ಅರುಣಾಚಲದಿಂದ ದೆಹಲಿಗೆ ರೈಲ್ವೇ ಸಂಪರ್ಕ ಉದ್ಘಾಟನೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಚೀನಾ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ರೈಲು ಉದ್ಘಾಟನೆಗೆ ಅರುಣಾಚಲಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದೆ.

ಅರುಣಾಚಲ ಪ್ರದೇಶ ಚೀನಾದ ದಕ್ಷಿಣ ಭಾಗಕ್ಕೆ ಸೇರಿದ್ದಾಗಿದ್ದು, ಭಾರತ ಅದನ್ನು ಅಕ್ರಮವಾಗಿ ಪ್ರವೇಶಿಸಿದೆ ಎಂದು ಚೀನಾ ಹೇಳಿದೆ. ಅಲ್ಲದೇ ಪ್ರಧಾನಿ ಮೋದಿ ಅರುಣಾಚಲಕ್ಕೆ ಭೇಟಿ ನೀಡಿರುವುದರ ಬಗ್ಗೆ ಭಾರತ ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಚೀನಾ ಪ್ರತಿನಿಧಿಗಳು ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರುವುದು ಉಭಯ ದೇಶಗಳ ನಡುವಿನ ಗಡಿ ವಿವಾದವನ್ನು ಬಗೆಹರಿಸುವುದಕ್ಕೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಚೀನಾ ಎಚ್ಚರಿಸಿದೆ. ಅರುಣಾಚಲ ಪ್ರದೇಶಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ ನೀಡಿದಾಗಲೂ ಸಹ ಚೀನಾ ಆಕ್ಷೇಪ ವ್ಯಕ್ತಪಡಿಸಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited