Untitled Document
Sign Up | Login    
Dynamic website and Portals
  
February 21, 2015

ಬೇಹುಗಾರಿಕೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ-ರಾಜನಾಥ್ ಸಿಂಗ್

ರಾಜನಾಥ್ ಸಿಂಗ್ ರಾಜನಾಥ್ ಸಿಂಗ್

ನವದೆಹಲಿ : ಕಾರ್ಪೊರೇಟ್ ಸಂಸ್ಥೆಗಳ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಕರಣ ಕುರಿತು ದೆಹಲಿ ಪೊಲೀಸರು ಕೂಲಂಕುಶವಾಗಿ ತನಿಖೆ ಕೈಗೊಂಡಿದ್ದು, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ ಎಂದು ಭರವಸೆ ನೀಡಿದರು.

ರಹಸ್ಯ ದಾಖಲೆ ಕಳವು ಮತ್ತು ಬಜೆಟ್‌ ಗೆ ಸೇರಲಿದ್ದ ಅನಿಲ ದರಕ್ಕೆ ಸಂಬಂಧಿಸಿದ ಪೂರಕ ಮಾಹಿತಿ ಸೋರಿಕೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 12 ಆರೋಪಿಗಳನ್ನು ಬಂಧಿಸಿದ್ದಾರೆ.

ಅನೇಕ ಗೋಪ್ಯ ದಾಖಲೆಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿರುವ ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಈ ದಾಖಲೆಗಳ ಪ್ರತಿಗಳನ್ನು ಕೂಡ ಕಾರ್ಪೊರೇಟ್ ಕಂಪನಿಗಳು ಹಾಗೂ ಎನರ್ಜಿ ಕನ್ಸಲ್ಟೆಂಟ್‌ಗಳಿಗೆ ನೀಡಲಾಗುತ್ತಿತ್ತು ಎಂದು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಆರೋಪಿಗಳಲ್ಲಿದ್ದ 3 ಡೈರಿಗಳಲ್ಲಿ ಕೆಲ ಪ್ರಮುಖ ದೂರವಾಣಿ ಸಂಖ್ಯೆಗಳು ಸಿಕ್ಕಿರುವುದಾಗಿ ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited