Untitled Document
Sign Up | Login    
Dynamic website and Portals
  
February 22, 2015

ಬಜೆಟ್ ಅಧಿವೇಶನ: ದೇಶದ ಜನತೆಗೆ ಹಲವು ನಿರೀಕ್ಷೆಗಳಿವೆ- ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ : ದೇಶದ ಜನತೆ ಹಲವು ನಿರೀಕ್ಷೆಗಳೊಂದಿಗೆ ಬಜೆಟ್ ಅಧಿವೇಶನವನ್ನು ಎದುರು ನೋಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಗೆ ಅವಕಾಶ ನೀಡಿ, ಪಕ್ಷಬೇಧ ಮರೆತು ಎಲ್ಲರೂ ಸೇರಿ ಜನರ ಸಮಸ್ಯೆ ಪರಿಹಾರಕ್ಕೆ ಚಿಂತಿಸೋಣ ಎಂದು ಕರೆ ನೀಡಿದರು.

ಅಧಿವೇಶನದಲ್ಲಿ ಆದ್ಯತೆ ಮೇರೆಗೆ ಎಲ್ಲಾ ವಿಷಯಗಳ ಬಗ್ಗೆಯೂ ಮುಕ್ತ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಪ್ರತಿಪಕ್ಷಗಳಿಗೆ ಭರವಸೆ ನೀಡಿದ ಮೋದಿ, ಸುಗಮ ಕಾಲಪಕ್ಕೆ ಸಹಕರಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಫೆ.23ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಗದ್ದಲಕ್ಕೆ ಸಾಕ್ಷಿಯಾಗುವ ನಿರೀಕ್ಷೆ ಇದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಎಲ್ಲ ಸಿದ್ಧತೆ ನಡೆಸಿವೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದು ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited