Untitled Document
Sign Up | Login    
Dynamic website and Portals
  
February 23, 2015

ಭೂ ಸ್ವಾಧೀನ ಸುಗ್ರೀವಾಜ್ನೆ ವಿರುದ್ಧ ಅಣ್ಣಾ ಹಜಾರೆ ಧರಣಿ: ಆಮ್ ಆದ್ಮಿ ಪಕ್ಷದಿಂದ ಬೆಂಬಲ

ಅಣ್ಣಾ ಹಜಾರೆ- ಅರವಿಂದ್ ಕೇಜ್ರಿವಾಲ್(ಸಂಗ್ರಹ ಚಿತ್ರ) ಅಣ್ಣಾ ಹಜಾರೆ- ಅರವಿಂದ್ ಕೇಜ್ರಿವಾಲ್(ಸಂಗ್ರಹ ಚಿತ್ರ)

ನವದೆಹಲಿ : 'ಭೂ ಸ್ವಾಧೀನ ಸುಗ್ರೀವಾಜ್ನೆ' ವಿರುದ್ಧ ಧರಣಿ ನಡೆಸುತ್ತಿರುವ ಅಣ್ಣಾ ಹಜಾರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದ್ದು ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರು ಭಾಗವಹಿಸುವ ಸಾಧ್ಯತೆ ಇದೆ.

ವಿರೋಧ ಪಕ್ಷಗಳ ವಿರೋಧದ ನಡುವೆಯೂ ಭೂ ಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ನೆ ತರಲು ಕೇಂದ್ರ ಎನ್ ಡಿ ಎ ಸರ್ಕಾರ ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಅಣ್ಣಾ ಹಜಾರೆ ಧರಣಿ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅಣ್ಣಾ ಹಜಾರೆ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಭೂ ಸ್ವಾಧೀನ ಕಾಯ್ದೆ ರೈತ ವಿರೋಧಿಯಾಗಿದೆ ಎಂದು ಆರೋಪಿಸಿದ್ದಾರೆ.

ರೈತ ವಿರೋಧಿ ಕಾಯ್ದೆಯ ಬಗ್ಗೆ ದೇಶಾದ್ಯಂತ ಇರುವ ರೈತರಿಗೆ ಮಾಹಿತಿ ನೀಡಿ, ಇದನ್ನು ದೊಡ್ಡ ಜನಾಂಧೋಲನವನ್ನಾಗಿ ಮಾಡುವುದಾಗಿ ಅಣ್ಣಾ ಹಜಾರೆ ಎಚ್ಚರಿಸಿದ್ದಾರೆ. ತಾವು ನಡೆಸುತ್ತಿರುವ ಧರಣಿಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಬಹುದೆಂದು ಅಣ್ಣಾ ಹಜಾರೆ ಕರೆ ನೀಡಿದ್ದಾರೆ. ಆದರೆ ಪ್ರತಿಭಟನೆ ನಡೆಯುವ ವೇದಿಕೆ ಮೇಲೆ ಬರಲು ಅವಕಾಶ ನೀಡುವುದಿಲ್ಲ. ಜನರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿ ಎಂದು ಹೇಳಿದ್ದಾರೆ. ಇದೇ ವೇಳೆ ಅಣ್ಣಾ ಹಜಾರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲಿದ್ದಾರೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಅಣ್ಣಾ ಹಜಾರೆ ಧರಣಿಗೆ ಬೆಂಬಲ ವ್ಯಕ್ತಪಡಿಸಿದ್ದು ಕೇಜ್ರಿವಾಲ್ ಸಹ ಧರಣಿಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited