Untitled Document
Sign Up | Login    
Dynamic website and Portals
  
February 23, 2015

ಮತಾಂತರದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ನಿರ್ಲಕ್ಷ್ಯ ವಹಿಸಿದೆ: ಕಾಂಗ್ರೆಸ್

ಲಖ್ನೌ : 'ಮತಾಂತರ'ದ ವಿಷಯ ಉತ್ತರ ಪ್ರದೇಶವಿಧಾನಸಭೆಯಲ್ಲೂ ಚರ್ಚೆಗೆ ಬಂದಿದೆ. ಫೆ.23ರ ವಿಧಾನಸಭಾ ಕಲಾಪದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉತ್ತರ ಪ್ರದೇಶ ಸರ್ಕಾರ ಮತಾಂತರವನ್ನು ತಡೆಗಟ್ಟಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದೆ.

ಕಳೆದ ವರ್ಷದ ಕೊನೆ 5 ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆದಿರುವ ಧಾರ್ಮಿಕ ಮತಾಂತರದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಸಂಪೂರ್ಣ ಮಾಹಿತಿ ನೀಡಬೇಕೆಂದು ಒತ್ತಾಯಿಸಿದ ಕಾಂಗ್ರೆಸ್ ಗೆ, ಸರ್ಕಾರ ಸೂಕ್ತ ಉತ್ತರ ನೀಡದ ಕಾರಣ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2020ರ ವೇಳೆಗೆ ದೇಶದಲ್ಲಿರುವ ಎಲ್ಲಾ ಮುಸ್ಲಿಮರನ್ನು ಹಿಂದೂಗಳನ್ನಾಗಿ ಮತಾಂತರ ಮಾಡಲಿದ್ದೇವೆ ಎಂದು ನಿರ್ದಿಷ್ಟ ಸಂಘಟನೆ ಮುಖಂಡರ ಹೇಳಿಕೆಯನ್ನು ಆಧಾರವಾಗಿಟ್ಟಿಕೊಂಡು ಕಾಂಗ್ರೆಸ್ ಮತಾಂತರದ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದೆ. ಅಲ್ಲದೇ ಇಂತಹ ಹೇಳಿಕೆಗಳು ಸಂವಿಧಾನಕ್ಕೆ ಧಕ್ಕೆ ಉಂಟುಮಾಡಲಿವೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

ಕಾಂಗ್ರೆಸ್ ಸದಸ್ಯರು ಪ್ರಸ್ತಾಪಿಸಿರುವ ವಿಷಯಕ್ಕೆ ಪ್ರತಿಕ್ರಿಯಿಸಿರುವ ಸಚಿವ ಆಜಂ ಖಾನ್, ಮತಾಂತರಗೊಳಿಸುವ ಸಂಬಂಧ ಹೇಳಿಕೆ ನೀಡಿರುವವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನಿರ್ದಿಷ್ಟ ರಾಜಕೀಯ ಪಕ್ಷ ಕೋಮುಸೌಹಾರ್ದ ಹಾಳುಮಾಡುತ್ತಿದೆ ಎಂದು ಆಜಂ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited