ಶ್ರೀನಗರ : 370ನೇ ವಿಧಿ ಹಾಗೂ ಎಎಫ್ಎಸ್ಪಿಎ ಕುರಿತು ಬಿಜೆಪಿ-ಪಿಡಿಪಿ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯ ಶಮನಗೊಂಡಿದ್ದು, ಮಾರ್ಚ್ 1ರಂದು ಪಿಡಿಪಿ ಮುಖ್ಯಸ್ಥ ಮುಫ್ತಿ ಮಹಮ್ಮದ್ ಸಯೀದ್ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಮಂಗಳವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದು, ಸರ್ಕಾರ ರಚನೆ ಪ್ರಕ್ರಿಯೆಗೆ ಅಂತಿಮ ಸ್ಪರ್ಶ ನೀಡಲಿದ್ದಾರೆ. ಜೊತೆಗೆ ವಾರಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು, ಮುಫ್ತಿ ಮಹಮ್ಮದ್ ಸಯೀದ್ ಅವರು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಿಡಿಪಿ ನಾಯಕ ಮುಫ್ತಿ ಮಹಮ್ಮದ್ ಸಯೀದ್ ಅವರಿಗೆ 6 ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆ ಮತ್ತು ಬಿಜೆಪಿಯ ನಿರ್ಮಲ್ ಸಿಂಗ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಕುರಿತು ಈಗಾಗಲೇ ಒಪ್ಪಂದವಾಗಿದೆ.